ಸಿಸಿಬಿ ಉಗ್ರ ಬೇಟೆ: ವೈದ್ಯ ನಯ್ಯೀಮ್ ಸಿದ್ದಕಿ ಸೆರೆ

ಇದರೊಂದಿಗೆ ಬಂಧಿತರ ಸಂಖ್ಯೆ 18ಕ್ಕೇರಿದೆ. ಗುರುವಾರ ಹುಬ್ಬಳ್ಳಿಯಲ್ಲಿ 6 ಮಂದಿ ಬಂಧನ. ಅಂದೇ ಬೆಂಗಳೂರಿನಲ್ಲಿ 5 ಮಂದಿ ಬಂಧನ. ಶುಕ್ರವಾರ ಹೈದರಾಬಾದಿನಲ್ಲಿ ಒಬ್ಬನ ಬಂಧನ. ಶನಿವಾರ ನಾಂದೇಡಿನಲ್ಲಿ ನಾಲ್ವರ ಬಂಧನ. ಭಾನುವಾರ ಬೆಂಗಳೂರಿನಲ್ಲಿ ಮತ್ತೊಬ್ಬನ ಸೆರೆ. ನಿನ್ನೆಯೇ ಇನ್ನೂ ಒಬ್ಬನ ಬಂಧನ.
ಈತನನ್ನು ಇಂದು ಬೆಳಗ್ಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧನದಲ್ಲಿರುವ ಶಂಕಿತ ಉಗ್ರರು ನೀಡಿದ ಮಾಹಿತಿಯನ್ನಾಧರಿಸಿ ನಿನ್ನೆ ಸಂಜೆ (ಸೆ. 2) ನಯ್ಯೀಮ್ ಸಿದ್ದಕಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಒಂದು ಲ್ಯಾಪ್ ಟಾಪ್, ಮೊಬೈಲ್, 10 ಸಾವಿರ ರೂಪಾಯಿ ನಗದನ್ನು ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸರು ಇದೀಗ ತಾನೇ ಹೇಳಿದ್ದಾರೆ.
ಮೂಲತಃ ದಾವಣಗೆರೆಯವನಾದ ನಯ್ಯೀಮ್ ಸಿದ್ದಕಿ ಬಂಧಿತ ಉಗ್ರರ ಜತೆ ಸಂಪರ್ಕದಲ್ಲಿದ್ದ. ನಯ್ಯೀಮ್ ಸಿದ್ದಕಿ ಇತರೆ ಉಗ್ರರಿಗೆ ಮೂಲ ಅಗತ್ಯ ಪರಿಕರಗಳು ಮತ್ತು ಧನ ಸಹಾಯ ಮಾಡುತ್ತಿದ್ದ. ಜತೆಗೆ, ಇತರರನ್ನು ಸಂಘಟನೆಗೆ ನೇಮಕ ಮಾಡಿಕೊಳ್ಳುವ ಕೆಲಸದಲ್ಲೂ ಭಾಗಿಯಾಗಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೂಕ್ತ ಕ್ರಮವನ್ನಾಧರಿಸಿ ಬಂಧಿತ ನಯ್ಯೀಮ್ ಸಿದ್ದಕಿಯನ್ನು ಕೋರ್ಟಿಗೆ ಹಾಜರುಪಡಿಸಲಾಗುವುದು. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈತ 2 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದ. ಇಲ್ಲಿನ ಇನ್ ಫ್ಯಾಂಟ್ರಿ ರಸ್ತೆಯಲ್ಲಿ ಟ್ರಾವೆಲಿಂಗ್ ಏಜೆನ್ಸಿ ನಡೆಸುತ್ತಿದ್ದ. ಬಂಧಿತ ಆರೋಪಿಗಳ ಓಡಾಟಕ್ಕೆ ಟಿಕೆಟ್ ಮಾಡಿಸಿಕೊಡುತ್ತಿದ್ದ ಎನ್ನಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications