• search
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

By Mahesh
|
Plastic Ban in Karnataka
ಬೆಂಗಳೂರು, ಸೆ.4: ಇನ್ನು 15 ದಿನದಲ್ಲಿ ರಾಜ್ಯಾದ್ಯಂತ ಪ್ಲಾಸ್ಟಿಕ್ ಕವರ್‌ಗಳನ್ನು ಸಂಪೂರ್ಣ ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಪ್ಲಾಸ್ಟಿಕ್ ಕವರ್ ಬಳಕೆ ನಿಷೇಧ ಜಾರಿಯಲ್ಲಿದೆ. ಈ ಹಿಂದೆ 40 ಮೈಕ್ರಾನ್ ಗಿಂತ ತೆಳುವಾದ ಪ್ಲಾಸ್ಟಿಕ್‌ನ್ನು ರಾಜ್ಯದಲ್ಲಿ ನಿಷೇಧಿಸಲಾಗಿತ್ತು. ಇನ್ನು ಮುಂದೆ
ಯಾವುದೇ ರೀತಿಯ ಪ್ಲಾಸ್ಟಿಕ್ ಕವರ್‌ಗಳನ್ನು ಬಳಸುವಂತಿಲ್ಲ ಎಂದು ಸಚಿವ ಶಿವಣ್ಣ ಹೇಳಿದ್ದಾರೆ.

ಪ್ಲಾಸ್ಟಿಕ್‌ನಿಂದಾಗಿ ಸಾಕಷ್ಟು ಸಮಸ್ಯೆಗಳು ಉಲ್ಬಣಗೊಳ್ಳುತ್ತಿದ್ದು, ಕಸ ವಿಲೇವಾರಿ ಬಿಕ್ಕಟ್ಟು ಬಗೆಹರಿಸಲಾಗದಂತಹ ಸ್ಥಿತಿ ತಲುಪಿದೆ. ಹೀಗಾಗಿ ಅನಿವಾರ್ಯವಾಗಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಈಗಾಗಲೇ ರಾಜ್ಯ ಸಕಾರ ನಿಷೇಧಿಸಿರುವ 40 ಮೈಕ್ರಾನ್ ಗಿಂತ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ಸಂಸ್ಥೆಗಳು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸಚಿವ ಶಿವಣ್ಣ ಬೇಸರ ವ್ಯಕ್ತಪಡಿಸಿದರು.

ಹದಿನೈದು ದಿನದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ರವಾನಿಸುವುದಾಗಿ ಹೇಳಿದರು. ಇನ್ನು ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಾರ್ಖಾನೆಗಳು ಪರ್ಯಾಯಇಂಧನವಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಒಟ್ಟಾರೆ ಪೆಡಂಭೂತವಾಗಿ ಕಾಡುತ್ತಿರುವ ಪ್ಲಾಸ್ಟಿಕ್‌ನ್ನು ಹದಿನೈದು ದಿನದೊಳಗೆ ರಾಜ್ಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ಧರಿಸಿದ್ದು, ಸ್ಥಳೀಯಸಂಸ್ಥೆಗಳು(ಸುಮಾರು 183 urban local bodies) ಈ ಬಗ್ಗೆ ಕಾರ್ಯಪ್ರವೃತ್ತವಾಗಲು ಅಣಿಯಾಗುವಂತೆ ಸೂಚಿಸಿದರು.

ಪಠ್ಯದಲ್ಲಿ ಪರಿಸರ ಅಳವಡಿಕೆ: ಪರಿಸರದ ಬಗ್ಗೆ ವಿದ್ಯಾರ್ಥಿದೆಸೆಯಿಂದಲೇ ಜಾಗೃತಿ ಮೂಡಿಸುವ ಸಲುವಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದಲ್ಲಿ ಪರಿಸರ ವಿಷಯವನ್ನು ಕಡ್ಡಾಯವಾಗಿ ಅಳವಡಿಸಲು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿದ್ದು, ಮುಂದಿನ ಶೈಕ್ಷಣಿಕವರ್ಷದಿಂದಲೇ ಇದನ್ನು ಜಾರಿಗೊಳಿಸುವಂತೆ ತಿಳಿಸಿದ್ದೇನೆ ಎಂದರು.

ಮಾಲಿನ್ಯ ಮಂಡಳಿಗೆ ಸರ್ಜರಿ: ರಾಜ್ಯ ಪರಿಸರ ಮಾಲಿನ್ಯವನ್ನು ನಿಯಂತ್ರಿಸಬೇಕಿದ್ದಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೇ ಮಲೀನವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ ಶಿವಣ್ಣ, ಈ ಮಾಲಿನ್ಯವನ್ನು ಶೀಘ್ರವೇ ನಿಯಂತ್ರಿಸುವುದಾಗಿ ಹೇಳಿದರಲ್ಲದೆ ಮಂಡಳಿಯಲ್ಲಿರುವ ಕೆಲ ಭ್ರಷ್ಟ ಅಧಿಕಾರಿಗಳಿಗೆ ಸದ್ಯದಲ್ಲೇ ತಕ್ಕ ಶಾಸ್ತಿ ಮಾಡುವುದಾಗಿ ಮಾಹಿತಿ ನೀಡಿದರು.

ಸಕಾಲ ವ್ಯಾಪ್ತಿಗೆ ಮಂಡಳಿ ಸೇವೆ: ರಾಜ್ಯದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಸಕಾಲ ಯೋಜನೆ ವ್ಯಾಪ್ತಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆರಂಭಿಕ ಸಮ್ಮತಿ ಪತ್ರ, ಕಾರ್ಯಾರಂಭ ಸಮ್ಮತಿ ಪತ್ರ, ಅಧಿಕಾರ ಪತ್ರ ಹಗೂ ವಸತಿ ಸಮುಚ್ಛಯ ಮತ್ತು ವಾಣಿಜ್ಯಸಂಕೀರ್ಣಗಳಿಗೆ ಪರವಾನಿಗೆ ನೀಡುವುದು ಸೇರಿದಂತೆ ಇನ್ನಿತರರು ಸೇವೆಯನ್ನು ತರಲಾಗುವುದು ಎಂದು ವಿವರಿಸಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Minister Sogadu Shivanna hinted total ban on plastic in Karnataka. Shivanna slammed State Pollution Control Board (KSPCB) is not efficient in containing pollution caused by plastic. Law already bans manufacture of plastic bags which are less than 40 micron

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more