ಮರೆ ಮಾಚಿದ ಆಸ್ತಿ: ಸದಾನಂದ ಗೌಡ ವಿರುದ್ಧ ದೂರು

ಪತ್ರಕರ್ತೆ ನಾಗಲಕ್ಷ್ಮಿ ಬಾಯಿ ಅವರು ಗುರುವಾರ ದೂರು ದಾಖಲಿಸಿದ್ದಾರೆ. ಪ್ರಾಥಮಿಕ ಹಂತದ ವಿಚಾರಣೆ ನಡೆಸಿದ ನಂತರ ಇದನ್ನು ವಿಚಾರಣೆಗೆ ತೆಗೆದುಕೊಳ್ಳಬೇಕೇ, ಬೇಡವೇ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಲೋಕಾಯುಕ್ತ ನ್ಯಾಯಾಧೀಶ ಎನ್.ಕೆ ಸುಧೀಂದ್ರರಾವ್ ಅವರು ಮುಂದಿನ ವಿಚಾರಣೆಯನ್ನು ಇದೇ ಸೆ. 10 ಕ್ಕೆ ಮುಂದೂಡಿದ್ದಾರೆ.
ಮರೆ ಮಾಚಿರುವ ಆಸ್ತಿ: ಸದಾನಂದಗೌಡ ಅವರು 1998ರಲ್ಲಿ ಪುತ್ತೂರಿನಲ್ಲಿ 10 ಸೆಂಟ್ ನಿವೇಶನವನ್ನು ಅಕ್ರಮವಾಗಿ ಖರೀದಿಸಿ ಮನೆ ನಿರ್ಮಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರು ಹೊರ ವಲಯದ ಬಾಗಲೂರು ಬಳಿ 7.5 ಗುಂಟೆ ಜಮೀನು ಖರೀದಿಸಿದ್ದಾರೆ. ಇದು ಗೋಮಾಳಕ್ಕೆ ಸೇರಿದ ಭೂಮಿ. ಭೂ ಪರಿವರ್ತನೆ ಮಾಡಿಕೊಳ್ಳದೆಯೇ ಇಲ್ಲಿ ಮನೆ ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಲ್ಲದೆ ಸಂಸದರಾಗಿದ್ದಾಗ, ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ನಿವೇಶನ ಪಡೆಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಪ್ರಮಾಣ ಪತ್ರದಲ್ಲಿ ಎಚ್.ಎಸ್.ಆರ್.ಬಡಾವಣೆಯಲ್ಲಿ ತಮ್ಮ ಪತ್ನಿ ಡಾಟಿ ಅವರ ಹೆಸರಲ್ಲಿ ಮನೆ ಹೊಂದಿರುವ ಅಂಶವನ್ನು ಪ್ರಸ್ತಾಪಿಸಿಲ್ಲ. ಸುಳ್ಳು ಪ್ರಮಾಣ ಪತ್ರ ಸಲ್ಲಿಸುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ.












Click it and Unblock the Notifications