ಮಂಗಳೂರು:ಮಾನವ ಕಳ್ಳ ಸಾಗಾಟಗಾರರ ಬಂಧನ

ಇನ್ನಷ್ಟು ಕಳ್ಳ ಸಾಗಾಟಗಾರರು ನಾಪತ್ತೆಯಾಗಿದ್ದು ಪೊಲೀಸರು ಅವರ ಶೋಧನೆಯಲ್ಲಿ ತೊಡಗಿದ್ದಾರೆ. ಬಂಧಿತರಾದವರು ಶ್ರೀಲಂಕಾ ಮತ್ತು ಆಸ್ಟ್ರೇಲಿಯಾಗೆ ಕಳ್ಳ ಸಾಗಾಟನೆ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಬಂಧಿತರೆಲ್ಲರೂ ಶ್ರೀಲಂಕಾ ಮೂಲದವರಾಗಿದ್ದು, ಪ್ರಮುಖ ಆರೋಪಿ ಸೇರಿ ಇಬ್ಬರು ಪರಾರಿಯಾಗಿದ್ದಾರೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮಾನವ ಕಳ್ಳ ಸಾಗಾಣಿಕೆಯ ಶಂಕೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಸಂಜೆಯ ವೇಳೆಗೆ ಇವರಿಂದ ಇನ್ನಷ್ಟು ಮಾಹಿತಿ ಕಲೆ ಹಾಕಲಾವುದು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications