• search

ಕಾವೇರಿ ವಿವಾದ : ಸೆ.15 ರಂದು ಮಂಡ್ಯ ಬಂದ್‌

By Mahesh
Subscribe to Oneindia Kannada
For Quick Alerts
ALLOW NOTIFICATIONS
For Daily Alerts
  Mandya Bandh on Sept 15
  ಮಂಡ್ಯ, ಸೆ. 14: ಸದ್ಭಾವನಾ ದೃಷ್ಟಿಯಿಂದ ಹಾಗೂ ಸುಪ್ರೀಂಕೋರ್ಟ್ ತೀರ್ಪು ಪಾಲಿಸಬೇಕಾದ್ದರಿಂದ ತಮಿಳುನಾಡಿಗೆ ನೀರು ಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿರುವುದನ್ನು ಮಂಡ್ಯ, ಮದ್ದೂರು ಕಡೆ ರೈತರು ಖಂಡಿಸಿದ್ದಾರೆ. ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿ, ಕೇಂದ್ರದ ಮೇಲೆ ಒತ್ತಡ ತರುವ ಉದ್ದೇಶದಿಂದ ಸೆ.15 ರಂದು ಮಂಡ್ಯ ಜಿಲ್ಲೆ ಬಂದ್‌ಗೆ ಸ್ಥಳೀಯ ರೈತ ಸಂಘಟನೆಗಳು ಕರೆ ನೀಡದೆ.

  ಮಂಡ್ಯ ಜಿಲ್ಲಾ ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಜಿ.ಮಾದೇಗೌಡ ಅವರ ನೇತೃತ್ವದಲ್ಲಿ ಗುರುವಾರ (ಸೆ.13) ದಿಂದ ಸೆ.19ರವರೆಗಿನ ಸಾಂಕೇತಿಕ ಧರಣಿ ನಡೆಯಲಿದೆ.

  ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ತಡೆಯಲು ಒತ್ತಾಯಿಸಿ ಧರಣಿ ಹಮ್ಮಿಕೊಳ್ಳಲಾಗಿದೆ. ಸೆ. 19ರಂದು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾವೇರಿ ನದಿ ಪ್ರಾಧಿಕಾರದ ಸಭೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ತೀರ್ಮಾನ ಕೈಗೊಳ್ಳಲು ಒತ್ತಡ ತಂತ್ರವಾಗಿ ಬಂದ್‌ಗೆ ಕರೆ ನೀಡುತ್ತಿದ್ದೇವೆ ಎಂದು ಮಾದೇಗೌಡ ಅವರು ತಿಳಿಸಿದರು.

  ಕೇಂದ್ರ ಸರ್ಕಾರ ತಮಿಳುನಾಡಿನ ಬ್ಲಾಕ್‌ಮೇಲ್ ತಂತ್ರಕ್ಕೆ ಮಣಿಯುತ್ತ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುವಂತಹ ತೀರ್ಮಾನ ತೆಗೆದುಕೊಳ್ಳುವುದನ್ನು ತಪ್ಪಿಸಲು ಬಂದ್ ಮೂಲಕ ಎಚ್ಚರಿಕೆ ನೀಡಬೇಕಾಗಿದೆ.

  ಜಿಲ್ಲೆಯಾದ್ಯಂತ ಎಲ್ಲಾ ಜನರು ಬಂದ್‌ಗೆ ಸಹಕರಿಸಿ ಯಶಸ್ವಿಗೊಳಿಸಬೇಕು.ತಾಲೂಕು ಕೇಂದ್ರಗಳಲ್ಲೂ ಧರಣಿ ನಡೆಸುವ ಮೂಲಕ ಚಳವಳಿಯನ್ನು ತೀವ್ರಗೊಳಿಸಬೇಕು ಎಂದು ಮಾದೇಗೌಡರು ಮನವಿ ಮಾಡಿದರು.

  ಸೆ.19ಕ್ಕೆ ಮೊದಲು ಬಂದ್ ನಂತರ ಸೆ.17ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಬೃಹತ್ ಜಾಥಾ ಮೂಲಕ ಕೇಂದ್ರಕ್ಕೆ ಎಚ್ಚರಿಕೆಯ ಗಂಟೆ ಭಾರಿಸಬೇಕು ಎಂದೂ ಅವರು ಕರೆಕೊಟ್ಟರು. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಸದಸ್ಯರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿ.ಮಾದೇಗೌಡ ತಿಳಿಸಿದರು.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Karnataka farmers outfits in Mandya district have called for 'Mandya bandh' on September 15 in protest against water release to Tamil Nadu. Karnataka government decide to show goodwill gesture and release 10,000 cusecs of water to Tamilnadu as per SC interim verdict.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more