ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೌರಿ ಗಣೇಶ ಹಬ್ಬಕ್ಕೆ 1300 ಹೆಚ್ಚುವರಿ ಬಸ್

By Mahesh
|
Google Oneindia Kannada News

KSRTC Bus service Gowri Ganesh Festival 2012
ಬೆಂಗಳೂರು, ಸೆ.16: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯು ತನ್ನ ಪ್ರಯಾಣಿಕರಿಗಾಗಿ ವಿಶೇಷ ಸೌಲಭ್ಯ, ಕೊಡುಗೆಗಳನ್ನು ನೀಡುತ್ತಿದೆ. ಹಬ್ಬದ ಸಂಬಂಧ ತಮ್ಮ ಊರುಗಳಿಗೆ ತೆರಳುವವ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ. ಮುಂಗಡ ಬುಕ್ಕಿಂಗ್ ನಲ್ಲಿ ರಿಯಾಯಿತಿ ನೀಡಲಾಗುತ್ತಿದೆ.

ಒಂದು ಬಾರಿಗೆ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೇಟ್ ಮುಂಗಡ ಕಾಯ್ದಿರಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಹಬ್ಬದ ಸಂದರ್ಭದಲ್ಲಿ ಸೆ.15ರಿಂದ 18 ರವರೆಗೆ ಹೆಚ್ಚುವರಿಯಾಗಿ 1300ಕ್ಕೂ ಅಧಿಕ ಬಸ್ಸುಗಳನ್ನು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಕ್ಕಿಂಗ್‌ಗೆ ವಿಶೇಷ ವ್ಯವಸ್ಥೆ: ವಾಯುವ್ಯ ಕರ್ನಾಟಕ ಸಾರಿಗೆ ವ್ಯಾಪ್ತಿಗೆ ಬರುವ ಪ್ರದೇಶಗಳಾದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರಾವಾರ ಮತ್ತು

ಈಶಾನ್ಯ ಕರ್ನಾಟಕ ಪ್ರದೇಶಗಳಾದ ಗುಲ್ಬರ್ಗಾ, ಬಳ್ಳಾರಿ, ರಾಯಚೂರು, ಹೊಸಪೇಟೆ ,ಕೊಪ್ಪಳ, ಯಾದಗಿರಿ, ಬೀದರ್ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ರಸ್ತೆ ಸ್ಯಾಟಲೈಟ್ ಮತ್ತು ಕೆಂಪೇಗೌಡ ಬಸ್ ನಿಲ್ದಾಣಗಳಲ್ಲಿ ಮುಂಗಡವಾಗಿ ಕಾಯ್ದಿರಿಸುವ ವಿಶೇಷ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ನಗರದಲ್ಲಿರುವ 173, ಮೈಸೂರು ನಗರದಲ್ಲಿರುವ 14 ಹಾಗೂ ಮಂಗಳೂರಿನಲ್ಲಿರುವ 54 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 250 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ: ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಸೇರಿದಂತೆ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಮೈಸೂರು ರಸ್ತೆ ಸ್ಯಾಟಲೈಟ್ ನಿಲ್ದಾಣ: ಮೈಸೂರು, ಪಿರಿಯಾಪಟ್ಟಣ, ವಿರಾಜಪೇಟೆ ,ಕುಶಾಲನಗರ , ಮಡಿಕೇರಿ ಮಾರ್ಗದ ಕಡೆ ಸಂಚರಿಸಲಿವೆ.

ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ: ತಮಿಳುನಾಡು, ಆಂಧ್ರಪ್ರದೇಶ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ತಿರುಚಿ, ಚೆನೈ, ಕೊಯಮೂತ್ತರು, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವವರಿಗೆ ಬಸ್ ಸಿಗಲಿದೆ.

ಹೆಚ್ಚುವರಿ ಬಸ್ಸು: ಜಿ.ಪಿ.ನಗರ, ಜಯನಗರ 4ನೇ ಮತ್ತು 9ನೇ ಹಂತ, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಕೆಂಗೇರಿಯ ಉಪನಗರ ಮುಂತಾದ ಸ್ಥಳಗಳಲ್ಲಿ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ ಮತ್ತು ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಬಸ್ಸುಗಳನ್ನು ಕಲ್ಪಿಸಿಕೊಡಲಾಗುತ್ತಿದೆ.

ಇ-ಟಿಕೆಟ್ ಬುಕ್ಕಿಂಗ್‌ನ್ನು ಇಲಾಖೆಯ ವೆಬ್‌ಸೈಟ್ ಮೂಲಕ ಖಾತೆ ಹೊಂದಿರುವವರು ಸುಲಭವಾಗಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಮೊಬೈಲ್‌ನಿಂದ 56767 ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಕಳುಸುವ ಮೂಲಕ ಮುಂಗಡ ಟಿಕೇಟುಗಳನ್ನು ಕಾಯ್ದಿರಿಸಬಹುದಾಗಿದೆ.

English summary
KSRTC bus is running special services route during Gowri Ganesh Festival and also 5% discount on group ticket booking. and 10% on to and fro trip booking. Overall 1300 extra buses will be running during the festival time around Karnataka and also connecting neighbour states
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X