ಜುಬೇಲ್, ಸೆ.17: ಸೌದಿ ಅರೇಬಿಯಾದ ಜುಬೇಲ್ ನಗರದಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ 15 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ 10 ಮಂದಿ ಭಾರತೀಯರು ಸಾವಿಗೀಡಾಗಿದ್ದಾರೆ.
ಬಸ್ಸಿನಲ್ಲಿ ಒಟ್ಟು 47 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಗಾಯಗೊಂಡವರನ್ನು ಜುಬೇಲ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.