ಪುಣೆಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, 6 ಸಾವು

ಪುಣೆ, ಸೆ.24: ಇಲ್ಲಿನ ಸಹಕಾರ ನಗರದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ದಿಢೀರ್ ಕುಸಿತ ಕಂಡು 6 ಜನ ಸಾವನ್ನಪ್ಪಿರುವ ಘಟನೆ ಸೋಮವಾರ (ಸೆ.24) ಜರುಗಿದೆ.

ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಸುಮಾರು 10 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕದಳ ಸಿಬ್ಬಂದಿ ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕಟ್ಟಡದ ಅವಶೇಷಗಳಡಿಯಲ್ಲಿ 10-12 ಜನ ಸಿಲುಕಿರುವುದು ಪತ್ತೆಯಾಗಿದೆ. ಅಗ್ನಿಶಾಮಕದಳ ಪರಿಹಾರ ಕಾರ್ಯಗಳು ಭರದಿಂದ ಸಾಗಿದೆ, ಕಟ್ಟಡದ ಒಳಗಡೆ ಸುಮಾರು 30-35ಕ್ಕೂ ಅಧಿಕ ಜನ ವಸತಿ ಇದ್ದ ಈ ಕಟ್ಟಡದ ಮಾಲೀಕರ ಬಗ್ಗೆ ಸುಳಿವು ಸಿಕ್ಕಿಲ್ಲ.

ಕಟ್ಟಡ ಕುಸಿತ ಸಂದರ್ಭದಲ್ಲಿ ಒಳಗೆ ಎಷ್ಟು ಮಂದಿ ಇದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುಮಾರು ಏಳೆಂಟು ತಿಂಗಳುಗಳ ಹಿಂದೆಯಷ್ಟೇ ಈ ಕಟ್ಟಡ ನಿರ್ಮಿಸಲಾಗಿತ್ತು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+