ಕಿಲ್ಲರ್ ಬಿಎಂಟಿಸಿಗೆ ಒಬ್ಬ ಬಲಿ, 6 ಜನ ಗಾಯಾಳು

ಕೆಆರ್ ಪುರಂನ ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ವಾಹನ ಮುಂದಿರುವ ಬೈಕ್ ಸವಾರರನ್ನು ಹಿಂದಿಕ್ಕುವ ಭರದಲ್ಲಿ ಸ್ಕೈವಾಕರ್ ಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದ ಬಟ್ಟೆ ವ್ಯಾಪಾರಿ 22 ವರ್ಷದ ಖುತುಬ್ ಸಮಿವುಲ್ಲಾ ಎಂಬುವರು ಮೃತಪಟ್ಟಿದ್ದಾರೆ. ಈ ಘಟನೆಯಿಂದ ಕೆಆರ್ ಪುರಂ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಗಂಟೆಗಟ್ಟಲೇ ಸಂಚಾರ ದಟ್ಟಣೆ ತೀವ್ರಗೊಂಡು ಟ್ರಾಫಿಕ್ ಜಾಮ್ ಸಮಸ್ಯೆಯಿಂದ ವಾಹನ ಸವಾರರು ಪರದಾಡಿದರು.
ಬಸ್ ಚಾಲಕ ರವೀಂದ್ರ ರೆಡ್ಡಿ ಅವರಿಗೂ ಗಾಯಗಳಾಗಿದೆ. ಉಳಿದಂತೆ 6 ರಿಂದ 8 ಮಂದಿ ಗಾಯಗೊಂಡಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರಲ್ಲಿ ಕರೀಮ್, ಕೃಷ್ಣ ಅಯ್ಯಂಗಾರ್, ಸುಬ್ಬಣ್ಣ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೆಆರ್ ಪುರಂ ಟ್ರಾಫಿಕ್ ವಿಭಾಗದ ಪೊಲೀಸರು ಹೇಳಿದ್ದಾರೆ.
ಗಾಯಗೊಂಡಿರುವವರ ಪೈಕಿ ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ಬಣ್ಣ ಅವರ ದೇಹಸ್ಥಿತಿ ಗಂಭೀರವಾಗಿದೆ.ಹೊಸಕೋಟೆಯಿಂದ ಸಿಟಿ ಮಾರ್ಕೆಟ್ ಗೆ ಬರುತ್ತಿದ್ದ ಬಿಎಂಟಿಸಿ ಬಸ್ ಮುಂದಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅನಾಹುತ ಸಂಭವಿಸಿದೆ. ಬೈಕ್ ಸವಾರನೂ ಗಾಯಗೊಂಡಿದ್ದು, ಸಿಎಂಎಚ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಡಿಸಿಪಿ ಲೋಕೇಶ್ ಕುಮಾರ್ ಹೇಳಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.


Click it and Unblock the Notifications
