ಸದ್ಯಕ್ಕೆ ನೀರು ಬಿಟ್ಟು, ಫ್ಯಾಕ್ಸ್ ಮೂಲಕ ಮೇಲ್ಮನವಿ: ಶೆಟ್ಟರ್

cauvery-row-karnataka-govt-ready-to-release-water
ಬೆಂಗಳೂರು, ಸೆ.29: ಸಧ್ಯಕ್ಕೆ ತಮಿಳುನಾಡಿಗೆ ನೀರು ಬಿಟ್ಟು, ಫ್ಯಾಕ್ಸ್ ಮೂಲಕ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರ್ವಪಕ್ಷ ಸಭೆಯ ಅನುಮೋದನೆಯ ಮೇರೆಗೆ ಸುಪ್ರೀಂಕೋರ್ಟಿಗೆ ಫ್ಯಾಕ್ಸ್ ಮೂಲಕ ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಪ್ರಾಧಿಕಾರದ ಆದೇಶಕ್ಕೆ ತಡೆಕೋರಲಾಗುವುದು. ಜತೆಗೆ ಪ್ರಧಾನಿ ಮಧ್ಯಸ್ಥಿಕೆಗೂ ಮನವಿ ಮಾಡಲಾಗುವುದು ಎಂದು ಶೆಟ್ಟರ್ ಹೇಳಿದ್ದಾರೆ.

ಇದಕ್ಕೂ ಮುನ್ನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 'ಕೋರ್ಟಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಸರಕಾರದ ಸಂಪೂರ್ಣ ವೈಫಲ್ಯದಿಂದಾಗಿ. ರೈತರು ಮತ್ತು ಇಲ್ಲಿನ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಕೋರ್ಟಿಗೆ ಮನವರಿಕೆ ಮಾಡಿಕೊಡಲು ರಾಜ್ಯದ ವಕೀಲರು ವಿಫಲರಾಗಿದ್ದಾರೆ. ಒಟ್ಟಾರೆಯಾಗಿ ಸರಕಾರದ ಬೇಜವಾಬ್ದಾರಿತನದಿಂದಾಗಿ ರಾಜ್ಯಕ್ಕೆ ವ್ಯತರಿಕ್ತವಾದಂತಹ ತೀರ್ಪು ಬಂದಿದೆ' ಎಂದಿದ್ದರು.

ಕಾವೇರಿದ ಚರ್ಚೆಯಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಚ್ ಡಿ ರೇವಣ್ಣ, ಕಾನೂನು ಸಚಿವ ಸುರೇಶ್ ಕುಮಾರ್, ಅಶೋಕ್, ಟಿಬಿ ಜಯಚಂದ್ರ, ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಮುಂತಾದವರು ಪಾಲ್ಗೊಂಡಿದ್ದಾರೆ. ಅಡ್ವೊಕೇಟ್ ಜನರಲ್ ವಿಜಯ್ ಶಂಕರ್ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಸಹ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+