ಕಿಂಗ್ ಫಿಷರ್ ಉದ್ಯೋಗಿ ಪತ್ನಿ ಸಾವು, ಮಲ್ಯಗೆ ಕುತ್ತು

ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಹಲವು ತಿಂಗಳುಗಳಿಂದ ಸಂಬಳ ಕೊಡುವುದನ್ನು ನಿಲ್ಲಿಸಿದೆ. ಇದರಿಂದ ಉದ್ಯೋಗಿಗಳ ಜೀವನೋಪಾಯಕ್ಕೆ ಕಷ್ಟವಾಗಿದೆ. ಕಿಂಗ್ ಫಿಷರ್ ಇಂಜಿನಿಯರ್ ಪತ್ನಿ ಸಾವಿಗೂ ಸಂಸ್ಥೆ ಕಾರಣ. ಹೀಗಾಗಿ ಸಂಸ್ಥೆ ಮಾಲೀಕರ ಮೇಲೆ ಕ್ರಮ ಜರುಗಿಸಬೇಕು ಎಂದು ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು.
ದೆಹಲಿಯ ಮಂಗಳಪುರಿ ಪ್ರದೇಶದ ನಿವಾಸಿ 45 ವರ್ಷದ ಸುಶ್ಮಿತಾ ಚಕ್ರವರ್ತಿ ಅವರು ತಮ್ಮ ನಿವಾಸದಲ್ಲಿ ಗುರುವಾರ (ಅ.4) ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
'ನನ್ನ ಪತಿ ಹಾಗೂ ಪುತ್ರನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ಆದರೆ, ಕಳೆದ ಆರು ತಿಂಗಳಿನಿಂದ ನನ್ನ ಪತಿ ಸಂಬಳವಿಲ್ಲದೆ ಮನೆ ನಡೆಸಲು ಆಗದೆ ಪಟ್ಟ ಕಷ್ಟ ನೆನೆದಾಗ ನನ್ನ ನಿರ್ಧಾರ ಸರಿ ಎನಿಸುತ್ತದೆ. ತೀವ್ರವಾದ ಆರ್ಥಿಕ ಸಂಕಷ್ಟದಲ್ಲಿ ನರಳಿ ನರಳಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದರು.
ಸುಶ್ಮಿತಾ ಅವರ ಪತಿ ಮನಸ್ ಚಕ್ರವರ್ತಿ ಅವರು ಕಿಂಗ್ ಫಿಷಶ್ ಏರ್ ಲೈನ್ಸ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದಾರೆ. ಆರ್ಥಿಕ ಸಂಕಷ್ಟದ ಸುಳಿಯಲ್ಲಿರುವ ಕಿಂಗ್ ಫಿಷರ್ ನ ಸುಮಾರು 270 ಇಂಜಿನಿಯರ್ ಗಳ ಜೊತೆ ಮನಸ್ ಚಕ್ರವರ್ತಿ ಕೂಡಾ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಕಿಂಗ್ ಫಿಷರ್ ವಿಮಾನಯಾನ ಸಂಸ್ಥೆ ತನ್ನ 4000 ಉದ್ಯೋಗಿಗಳ ಪೈಕಿ 2000 ಉದ್ಯೋಗಿಗಳಿಗೆ ಈ ವರ್ಷದ ಮಾರ್ಚ್ ತಿಂಗಳಿನ ತನಕ ಸಂಬಳ ನೀಡಿದೆ. ನಂತರ ಯಾರೊಬ್ಬರಿಗೂ ಸಂಬಳ ನೀಡುವಲ್ಲಿ ವಿಫಲವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications