ಅತ್ಯಾಚಾರ ಸಂತ್ರಸ್ತರಿಗೆ ಸೋನಿಯಾ ಸಾಂತ್ವನ

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ಹರ್ಯಾಣದಲ್ಲಿ ಮಾತ್ರವಲ್ಲ. ಬೇರೆಡೆಯೂ ಅತ್ಯಾಚಾರ ನಡೆಯುತ್ತಿದೆ ಎಂದು ಸೋನಿಯಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್ ಹೂಡ ಉಪಸ್ಥಿತರಿರಲಿಲ್ಲ ಎನ್ನಲಾಗಿದೆ.
ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಭೂಪೇಂದ್ರ ಸಿಂಗ್ ಹೂಡ ಸರ್ಕಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸೋನಿಯಾ ಗಾಂಧಿ ಅವರು ಉತ್ತರ ನೀಡಲು ನಿರಾಕರಿಸಿದ್ದಾರೆ.
ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ಸಿಂಗ್ ಹೂಡ ಉಪಸ್ಥಿತರಿರಲಿಲ್ಲ ಎನ್ನಲಾಗಿದೆ. ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಭೂಪೇಂದ್ರ ಸಿಂಗ್ ಹೂಡ ಸರ್ಕಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸೋನಿಯಾ ಗಾಂಧಿ ಅವರು ಉತ್ತರ ನೀಡಲು ನಿರಾಕರಿಸಿದ್ದಾರೆ.
ಖಾಪ್ ಪಂಚಾಯತ್ ಮೇಲೆ ಕಿಡಿ: ಕಾನೂನು ಮೀರಿ ಖಾಪ್ ಪಂಚಾಯತ್ ಗಳು ವರ್ತಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಖಾಪ್ ಪಂಚಾಯತ್ ಮುಖಂಡರು ನೀಡುತ್ತಿರುವ ಹೇಳಿಕೆಗಳು ಸಾಮಾಜದ ಆರೋಗ್ಯಕ್ಕೆ ಮಾರಕವಾಗಿದ್ದು, ಕಾನೂನು ವ್ಯವಸ್ಥೆಯನ್ನು ಹದಗೆಡಿಸುತ್ತದೆ. ಖಾಪ್ ಗಳು ಕಾನೂನನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಖಾಪ್ ಹೇಳಿಕೆ ಏನು?: ಹರ್ಯಾಣದಲ್ಲಿ ಎಗ್ಗಿಲ್ಲದೆ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಖಾತ್ ಪಂಚಾಯತ್ ಮುಖಂಡರು ಕೆಲವು ನಿಯಮಗಳನ್ನು ಸೂಚಿಸಿದ್ದರು. ಈಗ ಚಾಲ್ತಿಯಲ್ಲಿರುವ ಮದುವೆಯಾಗಲು ಬೇಕಾದ ಕನಿಷ್ಠ ವಯೋಮಿತಿಯನ್ನು ತೆಗೆದು ಹಾಕಬೇಕು. ಹುಡುಗಿಯರು ಋತುಮತಿಯಾಗುತ್ತಿದ್ದಂತೆ ಮದುವೆ ಮಾಡಿಬಿಡಬೇಕು.
ಹುಡುಗ ಹಾಗೂ ಹುಡುಗಿಯರ ವಯಸ್ಸು 16 ವರ್ಷ ಆಗುತ್ತಿದ್ದಂತೆ ಮದುವೆ ಮಾಡುವುದು ಒಳ್ಳೆಯದು. ಇದರಿಂದ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಖಾಪ್ ಪ್ರತಿನಿಧಿ ಸುಬೇ ಸಿಂಗ್ ಹೇಳಿದ್ದರು.
ಸೋನಿಯಾ ಭೇಟಿಯ ಮುನ್ನಾ ದಿನವೂ ಹರ್ಯಾಣದಲ್ಲಿ ಇನ್ನೆರಡು ಅತ್ಯಾಚಾರ ಪ್ರಕರಣಗಳು ವರದಿಯಾಗಿತ್ತು. ಪಾಣಿಪಟ್ ನಲ್ಲಿ ಅಪ್ರಾಪ್ತೆ ಹಾಗೂ ಅಂಬಲಾದಲ್ಲಿ ವಿಧವೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಪ್ರಕರಣ ದಾಖಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಳ್ಳುತ್ತಿದ್ದರೂ ಇದುವರೆವಿಗೆ ಯಾರೊಬ್ಬರನ್ನು ಬಂಧಿಸಿಲ್ಲ ಎಂದು ಸಂತ್ರಸ್ತರು ದೂರಿದ್ದಾರೆ.
ಸೋನಿಯಾ ಗಾಂಧಿ ಭೇಟಿ ನೀಡಿರುವ ಜಿಂದ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ದಲಿತ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಳು.
13 ಅತ್ಯಾಚಾರ ಪ್ರಕರಣಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರ ನೀಡುವಂತೆ ಭೂಪಿಂದರ್ ಸಿಂಗ್ ಹೂಡಾ ಸರ್ಕಾರವನ್ನು ರಾಷ್ಟ್ರೀಯ ಮಕ್ಕಳ ಸುರಕ್ಷತಾ ಆಯೋಗ (NCPCR) ಪ್ರಶ್ನಿಸಿದೆ.
ಹರ್ಯಾಣದಲ್ಲಿ ಸ್ತ್ರೀ, ಪುರುಷರ ಅನುಪಾತ 830:1000ರಷ್ಟಿರುವುದು ಆತಂಕಕಾರಿಯಾಗಿದೆ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಅತ್ಯಾಚಾರ ಪ್ರಕರಣದ ಆರೋಪಿಗಳ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಯೋಗ ಆಗ್ರಹಿಸಿದೆ.












Click it and Unblock the Notifications