ಆರು ಮಂದಿಯ ವಿರುದ್ಧ ಕೇಸು ಜಡಿದ ತಮಿಳುನಾಡು

tamilnadu-file-contempt-court-case-against-karnataka-sc
ಬೆಂಗಳೂರು, ಅ. 10: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಸರಕಾರ ಸತತವಾಗಿ ನ್ಯಾಯಾಂಗ ನಿಂದನೆ ಮಾಡುತ್ತಾ ಬಂದಿದೆ ಎಂದು ತಮಿಳುನಾಡು ಸರಕಾರವು ಅಧಿಕೃತವಾಗಿ ಸುಪ್ರೀಂಕೋರ್ಟಿನಲ್ಲಿ ಇಂದು ಬುಧವಾರ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.

ಕರ್ನಾಟಕ ಸರಕಾರದಲ್ಲಿ ಆಯಕಟ್ಟಿನ ಸ್ಥಳಗಳಲ್ಲಿರುವ ಒಟ್ಟು 6 ಮಂದಿಯ ವಿರುದ್ಧ ತಮಿಳುನಾಡು ನ್ಯಾಯಾಂಗ ನಿಂದನೆ ಕೇಸು ದಾಖಲಿಸಿದೆ.

ಅವರುಗಳ ಹೆಸರು ಇಂತಿದೆ: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್, ಮುಖ್ಯ ಇಂಜಿನಿಯರ್ ವಿಜಯಕುಮಾರ್, ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಸುರೇಶ್ ಕುಮಾರ್, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾವೇರಿ ನದಿ ನ್ಯಾಯಾಧಿಕರಣದ ಅಧ್ಯಕ್ಷರಾದ ಪ್ರಧಾನಿ ಮನಮೋಹನ್ ಸಿಂಗ್ ಅವರು ತಮಿಳುನಾಡಿಗೆ 9 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಸೆ. 19ರಂದು ಕರ್ನಾಟಕಕ್ಕೆ ಆದೇಶಿಸಿದ್ದರು. ಆದರೆ ಕರ್ನಾಟಕ ಆ ಆದೇಶವನ್ನು ಪರಿಪಾಲಿಸಿಲ್ಲ ಎಂಬುದು ತಮಿಳುನಾಡಿನ ಪ್ರಮುಖ ತಕರಾರಾಗಿದೆ.

ಕರ್ನಾಟಕದ ಪರ ವಕಾಲತ್ತು ವಹಿಸಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ಪ್ರಧಾನಿ ಸಿಂಗ್ ಅವರಿಗೆ ಬರೆದಿದ್ದ ಪತ್ರವನ್ನು ಮುಂದಿಟ್ಟುಕೊಂಡು ಕೃಷ್ಣ ವಿರುದ್ಧವೂ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ತಮಿಳುನಾಡು ಪರ ವಕೀಲರು ಆಲೋಚಿಸಿದ್ದರು ಎಂದು ತಿಳಿದುಬಂದಿದೆ.

ಕೃಷ್ಣ ಅವರು ಪತ್ರ ಬರೆದಿದ್ದು ತಪ್ಪು ಎಂದು ಡಿಎಂಕೆ ಮುಖಂಡ ಎಂಕೆ ಕರುಣಾನಿಧಿ ನಿನ್ನೆಯಷ್ಟೇ (ಮಂಗಳವಾರ) ಆಕ್ಷೇಪ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+