ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡಲು ಸೂಚನೆ

ಅ.16 ರಿಂದ ಅ.31ರವರೆಗೂ ನೀರು ಬಿಡುವಂತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಹೇಳಿದ್ದಾರೆ.
15 ಟಿಎಂಸಿ ಅಥವಾ ಪ್ರತಿದಿನ 1 ಟಿಎಂಸಿಯಂತೆ ನೀರು ಬಿಡಬೇಕು ಎಂದು ತಮಿಳುನಾಡು ಮನವಿ ಸಲ್ಲಿಸಿತ್ತು. ಅದರೆ, 9 ಟಿಎಂಸಿ (8.745) ನೀರು ಬಿಡುವಂತೆ ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶ ನೀಡಿದೆ.
ಅದರೆ, ತಮಿಳುನಾಡಿಗೆ ನೀರು ಬಿಡುವ ವಿಷಯದಲ್ಲಿ ಕರ್ನಾಟಕ ಸರ್ಕಾರ ದೃಢ ನಿರ್ಧಾರ ಕೈಗೊಂಡಿದ್ದು, ತಮಿಳುನಾಡಿಗೆ ಮತ್ತೊಮ್ಮೆ ನೀರು ಬಿಡಲು ಸಾಧ್ಯವಿಲ್ಲ ಎಂದು ಎಸ್ ವಿ ರಂಗನಾಥ್ ಸ್ಪಷ್ಟಪಡಿಸಿದ್ದಾರೆ.
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಜೊತೆ ಗುರುವಾರ (ಅ.11) ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಡೆಸಲಾಯಿತು.
ಸಭೆ ಮುಕ್ತಾಯವಾದ ನಂತರವೂ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಹಾಗೂ ಕೇಂದ್ರ ಜಲಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿ ಡಿವಿ ಸಿಂಗ್ ಅವರು ಇನ್ನೊಂದು ಸುತ್ತಿನ ಚರ್ಚೆ, ಮಾತುಕತೆ ನಡೆಸಿದರೂ ಪ್ರಯೋಜವಾಗಲಿಲ್ಲ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಬಗ್ಗೆ ಕರ್ನಾಟಕ ಸಲ್ಲಿರುವ ಅಕ್ಷೇಪ ಅರ್ಜಿ ಸುಪ್ರೀಂಕೋರ್ಟಿನಲ್ಲಿ ವಿಚಾರಣೆಗೆ ಬರುವ ಮುನ್ನವೇ ರಾಜ್ಯಕ್ಕೆ ಹಿನ್ನೆಡೆಯಾಗಿದೆ. ಕಾವೇರಿ ಕೊಳ್ಳದ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿದ ಅಧ್ಯಯನ ತಂಡ ಕೂಡಾ ಶುಕ್ರವಾರ (ಅ.11) ತನ್ನ ವರದಿಯನ್ನು ಕಾವೇರಿ ನದಿ ಪ್ರಾಧಿಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ.
ಸೆ.19ರಂದು ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಕಾವೇರಿ ನದಿ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನವಾದಂತೆ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. 9 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶಲಾಗಿತ್ತು.
ಅದರೆ, ಈವರೆಗೂ 13, 000 ಕ್ಯೂಸೆಕ್ಸ್ ನೀರು ಹರಿಸಲಾಗಿದೆ. ಕಾವೇರಿ ಕೊಳ್ಳದಲ್ಲಿ ಮಂಗಳವಾರ ಹಾಗೂ ಬುಧವಾರ ಒಳ್ಳೆ ಮಳೆಯಾದ ಕಾರಣ ಗಡಿಭಾಗದ ಬಿಳಿಗುಂಡ್ಲು ಜಲಾಗಾರದಿಂದ ಹೊರಹರಿವು ಹೆಚ್ಚಾಗಿದೆ ಎಂದು ಎಸ್ ವಿ ರಂಗನಾಥ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಪಾಲಿಸದೆ ನ್ಯಾಯಾಂಗ ನಿಂದನೆ ಮಾಡಿದೆ ಎಂದು ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿರುವುದಕ್ಕೆ ಕರ್ನಾಟಕ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಕ್ಕ ಉತ್ತರ ನೀಡಿದ್ದಾರೆ.
ಪ್ರತಿದಿನ ಸಮಸ್ಯೆ ಉಲ್ಬಣವಾಗುತ್ತಿರುವುದರಿಂದ ಕಾವೇರಿ ನದಿ ಪ್ರಾಧಿಕಾರದ ಸಭೆಗೂ ಮುನ್ನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲು ಬಯಸಿದ್ದರು. ಆದರೆ, ಪ್ರಧಾನಿ ಸಚಿವಾಲಯ ಭೇಟಿ ಸಾಧ್ಯತೆಯನ್ನು ತಳ್ಳಿ ಹಾಕಿ ಧಿಕ್ಕರಿಸಿರುವುದು ದುಃಖದ ಸಂಗತಿ ಎಂದು ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ.












Click it and Unblock the Notifications