• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಂಗಾರು ಲಕ್ಷ್ಮಣ್ ಗೆ ಜಾಮೀನು ಮಂಜೂರು

By Mahesh
|

ನವದೆಹಲಿ, ಅ.11: ನಕಲಿ ಅಕ್ರಮ ಶಸ್ತ್ರಾಸ್ತ್ರ ಖರೀದಿ ವ್ಯವಹಾರದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದು ಶಿಕ್ಷೆ ಅನುಭವಿಸುತ್ತಿದ್ದ ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷ ಬಂಗಾರು ಲಕ್ಷ್ಮಣ್ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ(ಅ.11) ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರು. ಲಂಚ ಪಡೆಯುತ್ತಿದ್ದಾಗ ತೆಹೆಲ್ಕಾ.ಕಾಂ ನಡೆಸಿದ್ದ ಕುಟುಕು ಕಾರ್ಯಾಚರಣೆಯಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷ ಬಂಗಾರು ಲಕ್ಷ್ಮಣ್ ಅವರಿಗೆ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರು. ಜುಲ್ಮಾನೆ ವಿಧಿಸಿತ್ತು.

ತಾವು ಎರಡು ಬಾರಿ ಬೈಪಾಸ್ ಸರ್ಜರಿ ಮಾಡಿಸಿಕೊಂಡಿದ್ದರಿಂದ ಮತ್ತು ತಮಗೆ ವಯಸ್ಸಾಗಿರುವುದರಿಂದ ಶಿಕ್ಷೆಯ ಪ್ರಮಾಣವನ್ನು ತಗ್ಗಿಸಬೇಕೆಂದು 72 ವರ್ಷದ ಬಂಗಾರು ಲಕ್ಷ್ಮಣ್ ನ್ಯಾಯಾಲಯವನ್ನು ಕೋರಿದ್ದರು.

ಆದರೆ, ಸಿಬಿಐ ವಕೀಲರು 5 ವರ್ಷಗಳ ಗರಿಷ್ಠ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದರು. ಬಂಗಾರು ಅವರ ವಯಸ್ಸು ಮತ್ತು ಅನಾರೋಗ್ಯವನ್ನು ಗಣನೆಗೆ ತೆಗೆದುಕೊಳ್ಳದ ಕೋರ್ಟ್ ನಾಲ್ಕು ವರ್ಷಕ್ಕೆ ಶಿಕ್ಷೆಯನ್ನು ನಿಗದಿ ಮಾಡಿದೆ. ಈ ಶಿಕ್ಷೆಯ ವಿರುದ್ಧ ದೆಹಲಿ ಹೈಕೋರ್ಟಿಗೆ ಬಂಗಾರು ಲಕ್ಷ್ಮಣ್ ಅವರ ವಕೀಲ ಮೇಲ್ಮನವಿ ಸಲ್ಲಿಸಿದ್ದರು.

ನಕಲಿ ಅಕ್ರಮ ಶಸ್ತ್ರಾಸ್ತ್ರ ಖರೀದಿ ವ್ಯವಹಾರದಲ್ಲಿ 1 ಲಕ್ಷ ರು. ಪಡೆಯುವಾಗ 2001ರಲ್ಲಿ ಬಂಗಾರು ಲಕ್ಷ್ಮಣ್ ಸಿಕ್ಕಿಬಿದ್ದಿದ್ದರು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ನಿಮಯ 9ರ ಅಡಿಯಲ್ಲಿ ಬಂಗಾರು ಲಕ್ಷ್ಣ್ಮಣ್ ಅವರ ಆರೋಪ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣ ಪ್ರಕಟವಾಗುತ್ತಿದ್ದಂತೆ ದೆಹಲಿ ಪೊಲೀಸರು ಲಕ್ಷ್ಮಣ್ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡು, ತಿಹಾರ್ ಜೈಲಿಗೆ ತಳ್ಳಲಾಗಿತ್ತು.

ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಪೀಠ- ದೈವಜ್ಞ ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸ್ ಗುರೂಜಿ ಉದ್ಯೋಗದಲ್ಲಿ ತೊಂದರೆ, ಮದುವೆ ವಿಳಂಬ, ಸತಿ- ಪತಿ ಕಲಹ, ಡೈವರ್ಸ್ ಪ್ರಾಬ್ಲಮ್, ಶತ್ರು ಪೀಡೆ, ಅತ್ತೆ -ಸೊಸೆ ಕಲಹ, ಸಂತಾನ ಸಮಸ್ಯೆ, ಆರೋಗ್ಯ ಸಮಸ್ಯೆ, ರಾಜಕೀಯದಲ್ಲಿ ಶತ್ರುಗಳ ಕಾಟ, ಸಿನಿಮಾ ಪ್ರವೇಶ ಇನ್ನೂ ಯಾವುದೇ ಗುಪ್ತ ಸಮಸ್ಯೆಗೆ ಗುರೂಜಿ ಅವರನ್ನು ನೇರವಾಗಿ ಭೇಟಿಯಾಗಬಹುದು. ಗುರೂಜಿ ಅವರ ಸಲಹೆ ಮತ್ತು ಪರಿಹಾರ ಪಡೆದುಕೊಂಡಂಥ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ವಿಳಾಸ # 37, 4th block, ಜಯನಗರ, ಬೆಂಗಳೂರು- 9986623344

English summary
Delhi CBI special court today(Oct.11) granted bail to former BJP president Bangaru Laxman in Arms deal case. Bangaru Laxaman was facing 4 year rigorous imprisonment and 1 lakh fine Tehelka.com had nailed Bangaru in a sting operation in 2001. Bangaru Laxman would be sent to Tihar jail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X