5 ದಿನದಿಂದ ಕೊಳೆಯುತ್ತಾ ಬಿದ್ದಿದ್ದ 2 ಟೆಕ್ಕಿಗಳ ಶವ

Wipro ಸಾಫ್ಟ್‌ವೇರ್ ಕಂಪನಿಯ ಸಿಬ್ಬಂದಿಯೊಬ್ಬರು ಬುಧವಾರ ಠಾಣೆಗೆ ಕರೆ ಮಾಡಿ, ಕಂಪನಿಯ ಹಿರಿಯ ವ್ಯವಸ್ಥಾಪಕ ರವಿ ಶಂಕರ್ ಠಾಕೂರ್ (42) ಐದು ದಿನಗಳಿಂದ ಕೆಲಸಕ್ಕೆ ಬಂದಿಲ್ಲ. ಅವರ ಮೊಬೈಲ್‌ಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೇ ನೀಡುತ್ತಿಲ್ಲ ಎಂದು ಹೇಳಿದರು. ಕೂಡಲೇ ಅಪಾರ್ಟ್‌ಮೆಂಟ್‌ಗೆ ಹೋಗಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿ ರವಿಶಂಕರ್ ಶವ ಪತ್ತೆಯಾಯಿತು ಎಂದು ಪೊಲೀಸರು ಹೇಳಿದರು.
ಬಿಹಾರ ಮೂಲದ ರವಿಶಂಕರ್, ಪತ್ನಿ ಮತ್ತು ಮಕ್ಕಳೊಂದಿಗೆ ದೂರವಾಗಿದ್ದಾರೆ. 10 ವರ್ಷದ ಹಿಂದೆ ನಗರಕ್ಕೆ ಬಂದಿದ್ದ ಅವರು, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ Shobha Daffodil ಹೆಸರಿನ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದರು. ಶವದ ಬಳಿ ಮದ್ಯದ ಬಾಟಲಿಗಳು ದೊರೆತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಸನ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ಫ್ರಾಂಕ್ಲಿನ್ ಮೆಂಡಿಸ್ (35) ಎಂಬ IBM ಕಂಪನಿ ಉದ್ಯೋಗಿಯ ಶವ ಪತ್ತೆಯಾಗಿದೆ. ಇವರ ಶವದ ಬಳಿಯೂ ಮದ್ಯದ ಬಾಟಲಿಗಳು ದೊರೆತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ತಿರುವನಂತಪುರ ಮೂಲದ ಫ್ರಾಂಕ್ಲಿನ್ ಮೆಂಡಿಸ್, 4 ವರ್ಷದ ಹಿಂದೆ ವಿವಾಹವಾಗಿದ್ದರು. ಇವರೂ ಸಹ ಒಂದು ವರ್ಷದಿಂದ ಪತ್ನಿಯಿಂದ ದೂರ ಉಳಿದಿದ್ದರು. ಇವರಿಗೆ ಮೂರು ವರ್ಷದ ಮಗಳಿದ್ದಾಳೆ.
ಮೆಂಡಿಸ್ ಅವರ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣ ಅಪಾರ್ಟ್‌ಮೆಂಟ್ ನಿವಾಸಿಗಳು ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಪೊಲೀಸರು ಮನೆಯ ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂತು. ಮೆಂಡಿಸ್, ಭಾನುವಾರ ಸಂಬಂಧಿಕರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ.
ಆ ನಂತರ ಅವರ ಮೊಬೈಲ್‌ಗೆ ಯಾವುದೇ ಕರೆಗಳು ಬಂದಿಲ್ಲ. ಅವರು ಅಸ್ತಮಾದಿಂದ ಬಳಲುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದರು.












Click it and Unblock the Notifications