ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಿಕಪ್ಪ : ಬಿಎಸ್‌ವೈ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ

By Prasad
|
Google Oneindia Kannada News

CBI files charge sheet against Yeddyurappa
ಬೆಂಗಳೂರು, ಅ. 16 : ಕಾನೂನು ಬಾಹಿರ ಡಿನೋಟಿಫಿಕೇಶನ್ ಮಾಡಿ ಅಕ್ರಮ ಗಣಿಗಾರಿಕೆಗೆ ಮಣೆ ಹಾಕಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಅವರ ಇಬ್ಬರ ಮಕ್ಕಳು, ಅಳಿಯ ಸೇರಿ 13 ಜನರ ವಿರುದ್ಧ ಸಿಬಿಐ ಪೊಲೀಸರು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಮಂಗಳವಾರ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಜಿಂದಾಲ್ ಸ್ಟೀಲ್ ವರ್ಕ್ಸ್, ಸೌತ್ ವೆಸ್ಟ್ ಮೈನಿಂಗ್ ಕಂಪನಿಗಳಿಗೆ ಗಣಿಗಾರಿಕೆ ಗುತ್ತಿಗೆ ನೀಡಲು ಯಡಿಯೂರಪ್ಪನವರು ಪ್ರೇರಣಾ ಟ್ರಸ್ಟ್, ಧವಳಗಿರಿ ಪ್ರಾಪರ್ಟಿ ಡೆವಲಪರ್ಸ್ ಮತ್ತು ಭಗತ್ ಹೋಂ ಕಂಪನಿಗಳ ಹೆಸರಿನಲ್ಲಿ 20 ಕೋಟಿ ರು. ಲಂಚ ಪಡೆದಿದ್ದರೆಂದು ಆರೋಪಿಸಿ ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು ತಮ್ಮ ಅಕ್ರಮ ಗಣಿಗಾರಿಕೆಯ ವರದಿಯಲ್ಲಿ ಪ್ರಸ್ತಾಪಿಸಿದ್ದರು.

ಯಡಿಯೂರಪ್ಪ, ಅವರ ಇಬ್ಬರು ಮಕ್ಕಳಾದ ಬಿ.ವೈ. ವಿಜಯೇಂದ್ರ, ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಜಿಂದಾಲ್ ಸ್ಟೀಲ್ ವರ್ಕ್ಸ್ ಮತ್ತು ಸೌತ್ ವೆಸ್ಟ್ ಮೈನಿಂಗ್ ಕಂಪನಿ ನಿರ್ದೇಶಕರುಗಳ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. ಕಿಕ್ ಬ್ಯಾಕ್‌ಗೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಅಕ್ರಮ ಗಣಿಗಾರಿಕೆ ವರದಿ ಸಲ್ಲಿಸುವ ಮುನ್ನ ಯಡಿಯೂರಪ್ಪ ಅವರಿಗೆ ತಮ್ಮ ಕೇಸನ್ನು ಮಂಡಿಸಲು ಸೂಕ್ತವಾದ ಅವಕಾಶ ನೀಡಿರಲಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅವರ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸಿತ್ತು. ನಂತರ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗಿ, ಸಿಬಿಐನಿಂದ ಮತ್ತೆ ತನಿಖೆ ನಡೆಸಬೇಕೆಂದು 2012ರ ಮೇ 11ರಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿತ್ತು.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಸಿಲುಕಿದ್ದ ಯಡಿಯೂರಪ್ಪ 2011ರ ಜುಲೈ 31ರಂದು ಜ್ಯೋತಿಷಿಗಳ ಅಣತಿಯ ಮೇರೆಗೆ ರಾಜೀನಾಮೆ ಸಲ್ಲಿಸಿದ್ದರು. ಅಂದಿನಿಂದ ಇಂದಿನವರೆಗೆ ಅಧಿಕಾರ ಮರಳಿ ಪಡೆಯಲು ಯಡಿಯೂರಪ್ಪ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಈಗ, ಬಿಜೆಪಿಯನ್ನೇ ತ್ಯಜಿಸುವುದಾಗಿ ಹೇಳಿರುವ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಸಲಾಗಿದೆ. ಡಿಸೆಂಬರ್ ನಲ್ಲಿ ಹೊಸ ಪಕ್ಷ ಘೋಷಿಸುವುದಾಗಿ ಘಂಟಾಘೋಷವಾಗಿ ಯಡಿಯೂರಪ್ಪ ಸಾರುತ್ತಿದ್ದಾರೆ.

English summary
Central Bureau of Investigation (CBI) files charge sheet against former Chief Minister (BJP) of Karnataka B.S. Yeddyurappa, sons Vijayendra and Raghavendra, son-in-law Sohan Kumar and nine others. The charge sheet has been filed on 16th October in CBI special court Bangalore in connection with mining kick backs and illegal denotificaiton of land benefiting Ms Jindal and South West mining company.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X