ಯಡಿಯೂರಪ್ಪ ಹೊಸ ಪಕ್ಷ ಡೋಂಟ್ ಕೇರ್ : ಗೌಡ್ರು

HD Deve Gowda
ಬೆಂಗಳೂರು, ಅ.25: ಹೊಸ ಪಕ್ಷ ಕಟ್ಟುವ ಹುಮ್ಮಸ್ಸಿನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇತರೆ ಪ್ರಾದೇಶಿಕ ಪಕ್ಷಗಳ ಜೊತೆ ಸಂಭಾವ್ಯ ಮೈತ್ರಿ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಆದರೆ, ಯಡಿಯೂರಪ್ಪ ಹೊಸ ಪಕ್ಷ ಮಾಡಿದರೆ ಮಾಡಲಿ ಐ ಡೋಂಟ್ ಕೇರ್ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ಈ ಮೂಲಕ ಯಡಿಯೂರಪ್ಪ ಅವರ ದೂರದ ಆಸೆಗೆ ಪ್ರಮುಖ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಈ ಬಗ್ಗೆ ಸಂಪೂರ್ಣ ಪ್ರತಿರೋಧ ವ್ಯಕ್ತಪಡಿಸಿದೆ.

ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಯಡಿಯೂರಪ್ಪ ಅವರು ಸ್ಥಾಪಿಸಲು ಉದ್ದೇಶಿಸಿರುವ ಹೊಸ ಪಕ್ಷದಿಂದ ಯಾವುದೇ ನಷ್ಟವಿಲ್ಲ. ಇತರೆ ಪ್ರಾದೇಶಿಕ ಪಕ್ಷಗಳೊಡನೆ ಜೆಡಿಎಸ್ ಕೈ ಜೋಡಿಸುವ ಸುದ್ದಿ ಸತ್ಯಕ್ಕೆ ದೂರವಾದದು.

ಯಡಿಯೂರಪ್ಪ ಅವರ ಬಗ್ಗೆ ವೃಥಾ ಮಾತನಾಡಿ ಅವರ ಜನಪ್ರಿಯತೆ ಹೆಚ್ಚಿಸಲು ನನಗೆ ಸಮಯವಿಲ್ಲ ಎಂದು ದೇವೇಗೌಡ ಹೇಳಿದರು.

ಇಷ್ಟೇ ಅಲ್ಲದೆ, ಯಡಿಯೂರಪ್ಪ ಅವರ ಯಾವುದೇ ಮಾತಿಗೆ ಪ್ರತಿಕ್ರಿಯೆ ನೀಡಬೇಕು. ಅವರ ಬಗ್ಗೆ ಮಾತನಾಡಬೇಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹಾಗೂ ಪಕ್ಷದ ಇತರೆ ನಾಯಕರಿಗೂ ಸೂಚಿಸಿದ್ದೇನೆ ಎಂದು ದೇವೇಗೌಡ ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಪ್ರವಾಸ ಆರಂಭಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗಿದೆ.

ಮುಂದಿನ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಆಡಳಿತಾ ರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಹಾಗೂ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಜೆಡಿಎಸ್ ನ ಪ್ರಮುಖ ಗುರಿಯಾಗಿದೆ ಎಂದು ದೇವೇಗೌಡ ಅವರು ಇದೇ ಸಂದರ್ಭದಲ್ಲಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+