ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ಬಾರಿ 50 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

By Prasad
|
Google Oneindia Kannada News

Govind Karjol
ಬೆಂಗಳೂರು, ಅ. 25 : 57ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಕೂಡ ನಾನಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ 50 ಸಾಧಕರಿಗೆ ಮಾತ್ರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರು ಗುರುವಾರ ಪತ್ರಕರ್ತರಿಗೆ ತಿಳಿಸಿದ್ದಾರೆ.

ಕಳೆದ ವರ್ಷ ನಾಲ್ಕು ಸಾವಿರ ಅರ್ಜಿಗಳು ಬಂದಿದ್ದರೆ ಈ ಬಾರಿ ಪ್ರಶಸ್ತಿಗಾಗಿ ಮೂರು ಸಾವಿರ ಜನರು ಅರ್ಜಿ ಗುಜರಾಯಿಸಿದ್ದಾರೆ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಜೊತೆ ಚರ್ಚೆ ನಡೆಸಿದ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಶಸ್ತಿಗಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಪರಿಗಣಿಸಲಾಗುವುದು. ಯಾವುದೇ ವಶೀಲಿಬಾಜಿಗೆ ಅವಕಾಶ ನೀಡಲಾಗುವುದಿಲ್ಲ. ಅರ್ಹರಿಗೆ ಮಾತ್ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪಡೆಯಲು ಅರ್ಜಿ ಗುಜರಾಯಿಸಿದವರ ಜೊತೆ ಪ್ರಶಸ್ತಿ ನಿರೀಕ್ಷೆ ಮಾಡಿರದ ಅನೇಕ ಸಾಧಕರನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುವುದು ಎಂದು ಅವರು ಹೇಳಿದರು.

ನವೆಂಬರ್ 1ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಯಾರ್ಯಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿದೆ? ಸದ್ಯಕ್ಕೆ ಅರ್ಜಿ ಹಾಕಿದವರು ಮತ್ತು ಕುತೂಹಲದಿಂದ ಕಾಯುತ್ತಿರುವವರು ಕೇಳಿಕೊಳ್ಳುತ್ತಿರುವ ಪ್ರಶ್ನೆಯಿದು. ಅಕ್ಟೋಬರ್ 31ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.

ಕಳೆದ ವರ್ಷ ಪ್ರಶಸ್ತಿ ಪ್ರದಾನ ದಿನವಾದ ನವೆಂಬರ್ 1ರಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ, ಅಂದು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದರು. ಈ ಘಟನೆಯ ನಂತರ ಎಂಇಎಸ್ ಅಧಿಕಾರದಲ್ಲಿದ್ದ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಲಾಗಿತ್ತು.

English summary
Kannada and culture minister Govind Karjol has said that only 50 people will receive award on the occasion of 57th Kannada Rajyotsava on November 1, 2012. He said, the final list will be prepared after discussing with Chief Minister Jagadish Shettar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X