ಫೆ. 7ರಿಂದ ಬಿಜಾಪುರದಲ್ಲಿ ಕನ್ನಡ ನುಡಿ ತೇರು

ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಸಮ್ಮೇಳನದಲ್ಲಿ ಸರಳ, ಸುವ್ಯವಸ್ಥಿತವಾಗಿ ನಡೆಯಲಿದೆ ಎಂದರು.
ರಾಜ್ಯದಲ್ಲಿ ಬರಗಾಲವಿರುವರಿಂದ ನವೆಂಬರ್ ತಿಂಗಳಿನಲ್ಲಿ ನಡೆಸಬೇಕಿದ್ದ ಸಮ್ಮೇಳನವನ್ನು ಮುಂದೂಡಲಾಗಿದೆ. ಫೆ.7ರಿಂದ ಬಿಜಾಪುರದ ಸೈನಿಕ ಶಾಲೆಯ ಆವರಣದಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ.
ಅ.17ರಂದು ಬಿಜಾಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಸ್ಥಳೀಯ ಶಾಸಕ ಅಪ್ಪು ಪಟ್ಟಣಶೆಟ್ಟಿ, ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಜಪ್ಪ, ಜಿಲ್ಲಾ ಕಸಾಪ ಅದ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಕೇಂದ್ರ ಕಸಾಪ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ಸೇರಿದಂತೆ ಜಿಲ್ಲೆಯ ಸಾಹಿತಿ, ಗಣ್ಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ದಿನಾಂಕ ನಿಗದಿಪಡಿಸಲಾಗಿದೆ ಎಂದು ಹಾಲಂಬಿ ಹೇಳಿದರು.
ಅದೇ ಸಭೆಯಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ.ಸಚಿವ ಗೋವಿಂದ ಕಾರಜೋಳ ಅವರು ಮಹಾಪೋಷಕರಾಗಿ, ಸಂಸದ ರಮೇಶ್ ಜಿಗಜಿಣಗಿ ಮತ್ತು ತಾವು ಪೋಷಕರಾಗಿಯೂ ನೇಮಕಗೊಂಡಿದ್ದೇವೆ. ಇನ್ನುಳಿದಂತೆ ಸಚಿವ ಎಸ್.ಕೆ.ಬೆಳ್ಳುಬ್ಬಿ, ಅಧ್ಯಕ್ಷರಾಗಿ, ಸ್ಥಳೀಯ ಶಾಸಕ ಅಪ್ಪು ಪಟ್ಟಣಶೆಟ್ಟಿ ಕಾರ್ಯಾಧ್ಯಕ್ಷರಾಗಿ, ಜಿಲ್ಲಾಧಿಕಾರಿ ಶಿವ ಯೋಗಿ, ಕೋಶಾಧ್ಯಕ್ಷರಾಗಿ, ಜಿಲ್ಲಾ ಕಸಾಪ ಅದ್ಯಕ್ಷ ಮಲ್ಲಿ ಕಾರ್ಜುನ ಯಂಡಿಗೇರಿ ಪ್ರಧಾನ ಕಾರ್ಯದರ್ಶಿಯಾಗಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.












Click it and Unblock the Notifications