ಯಡಿಯೂರಪ್ಪ ಬಗ್ಗೆ ಸತ್ಯ ನುಡಿದ ಈಶ್ವರಪ್ಪ

ಅದರೆ, ಯಡಿಯೂರಪ್ಪ ಅವರು ಬಿಜೆಪಿ ನಾಯಕರಾಗಿದ್ದು, ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಜಾರಿಯಲ್ಲಿದೆ ಎಂದರು. ಯಡಿಯೂರಪ್ಪ ಅವರನ್ನು ಓಲೈಸುವ ಕಾರ್ಯ ಮುಂದುವರೆದಿದ್ದು, ಧರ್ಮೇಂದ್ರ ಪ್ರಧಾನ್ ಅವರು ಬುಧವಾರ(ನ.7) ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಧರ್ಮೇಂದ್ರ ಪ್ರಧಾನ್ ಅವರು ನಾಳೆ ಬೆಂಗಳೂರಿಗೆ ಆಗಮಿಸಬೇಕಿತ್ತು. ಅದರೆ, ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಒಂದು ದಿನ ತಡವಾಗಿ ಆಗಮಿಸಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಇದೇ ವೇಳೆ ಯಡಿಯೂರಪ್ಪ ಅವರು ತಮ್ಮ ಬೆಂಬಲಿಗರೊಂದಿಗೆ ನ.6 ರಂದು ಆಪ್ತ ಭೋಜನಕೂಟ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಯಡಿಯೂರಪ್ಪ ಅವರನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಎಲ್ಲರೂ ಒಟ್ಟಾಗಿ ಮುಂದಿನ ಚುನಾವಣೆಯಲ್ಲಿ ಹೋರಾಟ ನಡೆಸುತ್ತೇವೆ. ಬಿಜೆಪಿ ಜಯಭೇರಿ ಬಾರಿಸುವಂತೆ ಮಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು.
ವಿರೋಧ ಪಕ್ಷಗಳ ಕನಸು ನನಸಾಗುವುದಿಲ್ಲ. ರಾಜ್ಯ ಬಿಜೆಪಿಯಲ್ಲಿ ಗೊಂದಲವಿರುವುದು ನಿಜ ಆದರೆ, ಅದನ್ನು ಬಗೆಹರಿಸಿಕೊಳ್ಳುವುದು ನಮಗೆ ಗೊತ್ತು. ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೇಂದ್ರದ ನಾಯಕ ಧರ್ಮೇಂದ್ರ ಪ್ರಧಾನ್ ಅವರು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಚರ್ಚೆ ನಡೆಸಲಿದ್ದಾರೆ.
ಯಡಿಯೂರಪ್ಪ ನಮ್ಮೆಲ್ಲರ ನಾಯಕ, ಕೆಲ ಸಂದರ್ಭಗಳಲ್ಲಿ ಅವರಿಗೆ ತೀವ್ರ ನೋವಾಗಿದೆ. ಕೆಲ ವರದಿಗಳ(ಲೋಕಾಯುಕ್ತ ಗಣಿ ವರದಿ ಎಂದು ಓದಿಕೊಳ್ಳಿ) ಗೊಂದಲದಿಂದಾಗಿ ಅವರಿಗೆ ಅಧಿಕಾರ ತಪ್ಪಿ ಹೋಗಿತ್ತು.
ಅವರನ್ನು ಪಕ್ಷದಲ್ಲಿ ಯಾರು ಮೂಲೆಗುಂಪು ಮಾಡಿಲ್ಲ. ನ.7 ರಂದು ಬಿಜೆಪಿಗೆ ಬಿಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡಲಿದ್ದಾರೆ ಎಂಬುದು ಮಾಧ್ಯಮ ಸೃಷ್ಟಿ. ಬಿಜೆಪಿ ಕಳೆದ ನಾಲ್ಕೈದು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದೆ ಎಂದು ಈಶ್ವರಪ್ಪ ಹೇಳಿದರು. ಈಶ್ವರಪ್ಪ ಅವರು ಬಿಜಾಪುರ, ಹಾವೇರಿ ಪ್ರವಾಸ ನಿರತರಾಗಿದ್ದಾರೆ.












Click it and Unblock the Notifications