ಕಿಂಗ್ ಫಿಷರ್ ಗೆ ನಷ್ಟ ಸ್ಪೈಸ್ ಜೆಟ್ ಗೆ ಲಾಭ

ಕಲಾನಿಧಿ ಮಾರನ್ ಒಡೆತನದ ಸ್ಪೈಸ್ ಜೆಟ್ ಸಂಸ್ಥೆ ಎರಡನೇ ತ್ರೈಮಾಸಿಕದಲ್ಲಿ ನಷ್ಟ ಕಡಿಮೆ ಮಾಡಿಕೊಂಡಿರುವ ಜೊತೆಗೆ ಪ್ರಯಾಣಿಕರ ದಟ್ಟಣೆಯನ್ನು ಹೆಚ್ಚಿಸಿಕೊಂಡಿದೆ.
ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ಪ್ರಸಕ್ತ ತ್ರೈಮಾಸಿಕದಲ್ಲಿ 163.52 ಕೋಟಿ ರು ಮಾತ್ರ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 240.07 ಕೋಟಿ ರು ನಷ್ಟ ಅನುಭವಿಸಿತ್ತು.
ಸ್ಪೈಸ್ ಜೆಟ್ ಮಾರಾಟ ಶೇ 57 ರಷ್ಟು ಏರಿಕೆ ಕಂಡಿದ್ದು, 1,207 ಕೋಟಿ ರು ನಷ್ಟು ವಹಿವಾಟು ನಡೆಸಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 766 ಕೋಟಿ ರು ನಷ್ಟು ಮಾರಾಟ ಕಂಡಿತ್ತು.
ಸ್ಪೈಸ್ ಜೆಟ್ ಸಂಸ್ಥೆ ನಷ್ಟಕ್ಕೆ ಹೋಲಿಸಿದರೆ ಕಿಂಗ್ ಫಿಷರ್ ಏರ್ ಲೈನ್ಸ್ ನಷ್ಟ ಇನ್ನಷ್ಟು ಹೆಚ್ಚಿದೆ. ಎರಡನೇ ತ್ರೈಮಾಸಿಕದಲ್ಲಿ 753.55 ನಷ್ಟ ಅನುಭವಿಸಿದೆ. ಕಳೆದ ವರ್ಷ ಇದೇ ತ್ರೈಮಾಸಿಕ ಅವಧಿಯಲ್ಲಿ 468.66 ಕೋಟಿ ರು ನಷ್ಟು ನಷ್ಟ ಅನುಭವಿಸಿತ್ತು.
ಲಾಭ ನಷ್ಟದ ನಡುವೆಯೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಎರಡೂ ಸಂಸ್ಥೆಯ ಷೇರುಗಳು ಸುಸ್ಥಿತಿ ಕಾಯ್ದುಕೊಂಡಿದೆ. ಸೋಮವಾರ ಮಾರುಕಟ್ಟೆ ಅಂತ್ಯಕ್ಕೆ ಸ್ಪೈಸ್ ಜೆಟ್ ಷೇರು ಗಳು 36.35 ರು ನಂತೆ ಶೇ 2.68 ರಷ್ಟು ಏರಿಕೆ ಕಂಡಿತ್ತು. ಕಳೆದ 30 ದಿನಗಳಿಂದ ಎನ್ ಎಸ್ ಇನಲ್ಲಿ ಯಾವುದೇ ಟ್ರೇಡಿಂಗ್ ನಡೆಸಿಲ್ಲ.
ಇದೇ ವೇಳೆ ಕಿಂಗ್ ಫಿಷರ್ ಏರ್ ಲೈನ್ಸ್ ಷೇರುಗಳು ಬಿಎಸ್ ಇನಲ್ಲಿ ಶೇ 4.66 ರಷ್ಟು ಏರಿಕೆ ಕಂಡು 14.16 ರು ನಂತೆ ಪ್ರಗತಿ ಕಂಡಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications