• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹೊಸ ಪದ ತಂತ್ರಾಂಶ, ಕನ್ನಡಿಗರಿಗೆ ದೀಪಾವಳಿ ಕೊಡುಗೆ

By ವಿಕಾಸ್ ಹೆಗಡೆ
|
Pada Kannada Software
ಕಂಪ್ಯೂಟರಲ್ಲಿ ಕನ್ನಡದ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ. ಅಂತರಜಾಲದಲ್ಲಿ ಸದ್ಯಕ್ಕೆ ಕನ್ನಡ ವೆಬ್ ಸೈಟುಗಳ ಸಂಖ್ಯೆ ಕಡಿಮೆ ಇದ್ದರೂ ಕೂಡ ಓದುಗರ ಸಂಖ್ಯೆ ಕಡಿಮೆ ಇಲ್ಲ. ಬಹಳಷ್ಟು ಜನ ಕಂಪ್ಯೂಟರ್ನಲ್ಲಿ ಕನ್ನಡದಲ್ಲಿ ಬರೆಯಲು ಬಯಸುತ್ತಿದ್ದಾರೆ.

ಕೆಲವರು ಒತ್ತಕ್ಷರ, ದೀರ್ಘ, ಅಲ್ಪಪ್ರಾಣ, ಮಹಾಪ್ರಾಣ ಮುಂತಾದ ಟೈಪಿಂಗ್ ಸ್ವಲ್ಪ ಸಮಸ್ಯೆಯಾಗಿ ಹಿಂಜರಿಯುತ್ತಿದ್ದಾರೆ. ಆದರೂ ಕೂಡ ಉತ್ಸಾಹಿಗಳಿಗೇನೂ ಕಡಿಮೆ ಇಲ್ಲ. ಬಹಳ ಸುಲಭವಾಗಿ ನೇರವಾಗಿ ಎಲ್ಲಿ ಬೇಕಾದರೂ ಕನ್ನಡದಲ್ಲಿ ಬರೆಯಲು ಗೂಗಲ್, ಮೈಕ್ರೋಸಾಫ್ಟ್, ಪ್ರಮುಖ್ ಮುಂತಾದ ಹಲವು IME ಟೂಲ್ ಗಳಿವೆ. ನುಡಿ, ಪದ, ಬರಹದ IME ಜೊತೆಗೆ ಪದ ಸಂಸ್ಕಾರಕಗಳೂ (Word Processors) ಇವೆ.

ಆನ್ ಲೈನ್ ನಲ್ಲಿ ಬರೆಯಲು ಹಲವು ಟೂಲ್ ಗಳಿವೆ. ಸಾಮಾನ್ಯ ಬಳಕೆದಾರರಿಗೆ ಈಗ ಯಾವ ತಾಂತ್ರಿಕ ಸಮಸ್ಯೆ ಇಲ್ಲ. ಬೇಕಾಗಿರುವುದು ಸ್ವಲ್ಪ ಆಸಕ್ತಿ, ಅಭ್ಯಾಸ ಅಷ್ಟೆ. ಈ ಮೊದಲು ವ್ಯಾಪಕವಾಗಿ ಬಳಕೆಯಲ್ಲಿದ್ದ 'ಬರಹ' ತಂತ್ರಾಂಶ ಆವೃತ್ತಿ ಹತ್ತರ ಬಳಿಕ ಉಚಿತವಾಗಿ ಲಭ್ಯವಿಲ್ಲ.

ಅದರಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಒಟ್ಟುಮಾಡಲು ಸದ್ಯಕ್ಕೆ ಬರಹ ತಂತ್ರಾಂಶಕ್ಕೆ ಶುಲ್ಕವಿಡಲಾಗಿದೆ ಎಂದು ಹೇಳಲಾಗಿದೆ. 'ನುಡಿ' ತಂತ್ರಾಂಶದಲ್ಲಿ ಹೆಚ್ಚಿನ ಸೌಲಭ್ಯಗಳಿಲ್ಲ ಮತ್ತು ಡೌನ್ಲೋಡ್ ಮಾಡಲು ಬೇಕಾದ ತಾಣ ಈಗ ಇಲ್ಲ

ಈ ಸಂದರ್ಭದಲ್ಲಿ 'ಪದ' ತಂತ್ರಾಂಶದ ಹೊಸ ಆವೃತ್ತಿ (Pada 4.0) ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಬರೆಯಲು ಸಾಧ್ಯವಿರುವ ಈ ತಂತ್ರಾಂಶದಲ್ಲಿ ಮುಖ್ಯವಾಗಿ ಕನ್ನಡಕ್ಕೆ ಹಲವು ರೀತಿಯ ವಿಶೇಷ ಸೌಲಭ್ಯಗಳಿವೆ.

ಸ್ಪೆಲ್ ಚೆಕರ್, ಪದ ಅರ್ಥ, ಆಟೋ ಕಂಪ್ಲೀಟ್ ಸೌಲಭ್ಯಗಳಿವೆ. ಮೊತ್ತಮೊದಲ ಬಾರಿಗೆ ಎರಡು ಲಕ್ಷಕ್ಕೂ ಹೆಚ್ಚು ಪದಗಳನ್ನುಳ್ಳ ನಿಘಂಟು ಕೂಡ ಇದರಲ್ಲಿದೆ. ಟೈಪಿಸಿದ ಕಡತಗಳನ್ನು ಹಲವು ರೀತಿಯಲ್ಲಿ ಉಳಿಸಲು(save as) ಅವಕಾಶವಿದೆ.

ಹಲವು ಬಗೆಯ ಅಕ್ಷರ ಶೈಲಿಗಳಿವೆ (Font styles). ಪದ ತಂತ್ರಾಂಶ ಅಳವಡಿಸಿಕೊಂಡಾಗ ಅದರ ಜೊತೆ ಪದ IME ಕೂಡ ಇರುತ್ತದೆ. ಇದನ್ನು ಆನ್ ಮಾಡಿಕೊಂಡು ವರ್ಡ್, ಎಕ್ಸೆಲ್ ಮುಂತಾದ ಯಾವುದೇ ಅಪ್ಲಿಕೇಶನ್ ಗಳಲ್ಲಿ ಹಾಗೂ ಇಮೇಲ್, ಚಾಟ್, ಫೇಸ್ ಬುಕ್, ಬ್ಲಾಗ್ ಮುಂತಾದ ಯಾವುದೇ ಅಂತರಜಾಲ ತಾಣಗಳಲ್ಲಿ ನೇರವಾಗಿ ಕನ್ನಡದಲ್ಲಿ ಟೈಪಿಸಬಹುದು. ಈ ತಂತ್ರಾಂಶ ಉಚಿತವಾಗಿ ದೊರೆಯುತ್ತದೆ. ಇದನ್ನು ಈ ತಾಣದಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. http://www.pada.pro

ಇದರಲ್ಲಿರುವ ಸೌಲಭ್ಯಗಳು ಹೀಗಿವೆ.
1. ವಿಂಡೋಸ್ ಎಲ್ಲಾ ಆವೃತ್ತಿಗಳಲ್ಲೂ ಅಳವಡಿಸಿಕೊಳ್ಳಬಹುದು. (ಲಿನಕ್ಸ್ ಆವೃತ್ತಿ ಅಭಿವೃದ್ಧಿಗೊಳ್ಳುತ್ತಿದೆ)
2. ನಾಲ್ಕು ಬಗೆಯ ಕೀಬೋರ್ಡ್ ಆಯ್ಕೆ.
ಅ) ಫೊನೆಟಿಕ್
ಬ) ಫೊನೆಟಿಕ್ 2
ಕ) ನುಡಿ (ಕಗಪ)
ಡ) ಟ್ರಾನ್ಸ್ ಲಿಟೆರೇಶನ್
3. ಟೈಪಿಸುವಾಗ ಪದಗಳ ಸ್ವಯಂಪೂರ್ಣಗೊಳ್ಳುವಿಕೆ (Auto Complete).
4. ಕಡತಗಳನ್ನು plain text, rich text, HTML ರೀತಿಯಲ್ಲಿ ಉಳಿಸುವುದು ಮತ್ತು ಸಂಪಾದಿಸುವುದು.
5. ಪಿಡಿಎಫ್ ಕಡತದ ರಚನೆ. (Create PDF)
6. ಆನ್ ಲೈನ್ ವಿಕ್ಷನರಿಗೆ ಸಂಪರ್ಕ. (ಯಾವುದೇ ಪದದ ಮೇಲೆ ನೇರವಾಗಿ ರೈಟ್ ಕ್ಲಿಕ್ ಮಾಡಿ ವಿಕ್ಷನರಿಯಲ್ಲಿ ಅರ್ಥ ಹುಡುಕಬಹುದು)
7. ಪದಕೋಶ: ಎರಡು ಲಕ್ಷಕ್ಕೂ ಹೆಚ್ಚು ಪದಗಳಿರುವ ಆಫ್ ಲೈನ್ ನಿಘಂಟು.
8. ಹುಡುಕು ಮತ್ತು ಬದಲಿಸು (Find and Replace) ಸೌಲಭ್ಯ.
9. ಸ್ಪೆಲ್ ಚೆಕರ್ (Spell checker)
10. ಲಿಪಿ ಪರಿವರ್ತಕ (Font convert) - ಒಂದು ಭಾಷೆಯ ಲಿಪಿಯಿಂದ ಮತ್ತೊಂದಕ್ಕೆ ಪರಿವರ್ತನೆ ಹಾಗೂ ANSI ಇಂದ ಯುನಿಕೋಡ್ ಗೆ ಪರಿವರ್ತನೆ.
11. ಹಲವು ರೀತಿಯ ಅಕ್ಷರ ಶೈಲಿಗಳು (Font styles).
12. ಪದ IME : ಎಲ್ಲಿ ಬೇಕಾದರೂ ನೇರವಾಗಿ ಕನ್ನಡ ಟೈಪಿಸುವ ಎಂಜಿನ್.
13. ಅಕ್ಷರಗಳ ವಿವಿಧ ಗಾತ್ರ, ಬಣ್ಣ ಮತ್ತು ಹಿನ್ನೆಲೆಯ ಬಣ್ಣಗಳ ಸೌಲಭ್ಯ ಸೇರಿದಂತೆ ಇನ್ನೂ ಹಲವು formatting ಆಯ್ಕೆಗಳು.

ಪದ ತಂತ್ರಾಂಶದ ಇನ್ನೊಂದು ವಿಶೇಷವೆಂದರೆ ಬರಹ, ನುಡಿ ಮುಂತಾದ ತಂತ್ರಾಂಶಗಳಲ್ಲಿ ಉಳಿಸಿಟ್ಟಿರುವ ಯಾವುದೇ ಕಡತಗಳನ್ನು ನೇರವಾಗಿ ಇದರಲ್ಲಿ ತೆರೆಯಬಹುದು. ಅದು ಯುನಿಕೋಡ್ ಅಕ್ಷರಗಳಾಗಿ ತೆರೆದುಕೊಳ್ಳುತ್ತದೆ.

ಮತ್ತೊಂದು ವಿಶೇಷವೆಂದರೆ ಪದ ತಂತ್ರಾಂಶದ ಮೂಲಕ ರಚಿಸಿದ ಪಿಡಿಎಫ್ ಕಡತಗಳಲ್ಲಿ ಯಾವುದೇ ಪದವನ್ನು ಕೂಡ ಹುಡುಕಬಹುದು (find) ಹಾಗೂ ಪಿಡಿಎಫ್ ಕಡತದಲ್ಲಿರುವ ಪಠ್ಯವನ್ನು ಕಾಪಿ ಮಾಡಿ ಬೇರೆಡೆಗೆ ಪೇಸ್ಟ್ ಮಾಡಬಹುದು. ಯಾವುದೇ ಫಾಂಟ್ ಸಮಸ್ಯೆ ಉಂಟಾಗುವುದಿಲ್ಲ.

ಪದ ತಂತ್ರಾಂಶದ zipped version ಕೂಡ ಲಭ್ಯವಿದೆ. ಬಹುತೇಕ ಆಫೀಸ್ ಮುಂತಾದ ಕಡೆ ಗಣಕದಲ್ಲಿ ಯಾವುದೇ ತಂತ್ರಾಂಶ ಅಳವಡಿಸಿಕೊಳ್ಳಲು admin rights ಅಥವಾ permission ಇರುವುದಿಲ್ಲ. ಅಂತಹ ಕಡೆ ಈ zipped version ಇಟ್ಟುಕೊಂಡು ಕನ್ನಡದಲ್ಲಿ ಬರೆಯಬಹುದು. ನಮ್ಮ ಕಂಪ್ಯೂಟರಿನಲ್ಲಿ ಇನ್ ಸ್ಟಾಲ್ ಮಾಡಿಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಇಷ್ಟೆಲ್ಲಾ ಸೌಲಭ್ಯಗಳ ತಂತ್ರಾಂಶ ರಚಿಸಿ ಉಚಿತವಾಗಿ ಬಳಕೆಗೆ ದೊರೆಯುವಂತೆ ಮಾಡಿರುವ ತಂತ್ರಾಂಶ ಅಭಿವೃದ್ಧಿಗಾರರಾದ ಲೋಹಿತ್ ಶಿವಮೂರ್ತಿಯವರಿಗೆ ಧನ್ಯವಾದಗಳು.

ಡೌನ್ ಲೋಡ್ ಮಾಡಿಕೊಳ್ಳುವ ತಾಣ: http://www.pada.pro/download

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
‘Pada Software’ is a Word processor for Indic Scripts, especially for Kannada script. The software developed by Lohith D Shivamurthy is a collection of tools for processing Indic scripts. Specialized Editor, IMEs (Input Method Engine) and PadaKosha (Dictionary) etc.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more