ನೈಸ್ ಹಗರಣ : ಗೌಡ ಸೇರಿ 30 ಜನರ ವಿರುದ್ಧ ಎಫ್ಐಆರ್

ಭಾರತೀಯ ದಂಡ ಸಂಹಿತೆಯ 423, 463 ಮುಂತಾದ ಸೆಕ್ಷನ್ ಅಡಿಗಳಲ್ಲಿ ಕೇಸ್ ದಾಖಲಿಸಲಾಗಿದ್ದು, ಡಿವೈಎಸ್‌ಪಿ ಫಾಲಾಕ್ಷಯ್ಯ ಅವರ ನೇತೃತ್ವದಲ್ಲಿ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ. ತನಿಖಾ ತಂಡದಲ್ಲಿ ಪೊಲೀಸ್ ಅಧಿಕಾರಿಗಳಾದ ಲೋಕೇಶ್ ಮತ್ತು ನಿಜಾಮುದ್ದಿನ್ ಅವರು ಇದ್ದಾರೆ.
ತನಿಖೆಗೆ ಒಳಗಾಗಲಿರುವ ಇತರ ಪ್ರಮುಖರೆಂದರೆ, ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ, ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರ್ನಹಳ್ಳಿ. ಹಲವಾರು ಬ್ಯಾಂಕ್ ಅಧಿಕಾರಿಗಳು, ಐಪಿಎಸ್, ಐಎಎಸ್ ಅಧಿಕಾರಿಗಳ ವಿರುದ್ಧ ಕೂಡ ತನಿಖೆ ನಡೆಸಲು ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆಯಲ್ಲಿ ರೈತರಿಗೆ ಅನ್ಯಾಯ ಮಾಡಲಾಗಿದೆ, ಭೂ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ, ನೈಸ್ ಚೇರ್ಮನ್, ಮಾಜಿ ಮುಖ್ಯಮಂತ್ರಿಗಳು, ಹಲವು ಪಕ್ಷಗಳ ನಾಯಕರು ಸೇರಿದಂತೆ 102 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.












Click it and Unblock the Notifications