ಹುಡುಗಿರ ಚುಡಾಯಿಸಿದರೆ DL ಕಿತ್ಕೋತಾರೆ, ಹುಷಾರು!

no-driving-licence-passport-eve-teasers-madhya-pradesh
ಗ್ವಾಲಿಯರ್, ನ. 21: ಮಧ್ಯ ಪ್ರದೇಶ ಸರಕಾರ ರಾಜ್ಯದಲ್ಲಿ ಮಹಿಳೆಯರ ರಕ್ಷಣೆಗೆ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಏನಿಲ್ಲ, ಹುಡುಗಿಯರನ್ನು ಚುಡಾಯಿಸುವುದು, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವುದು ಮತ್ತಿತರ ದೌರ್ಜನ್ಯ ಮಾಡುವವರಿಗೆ ವಾಹನ ಚಾಲನಾ ಪರವಾನಿಗೆ (DL), ಪಾಸ್‌ಪೋರ್ಟ್ ಸೇರಿದಂತೆ ಸರಕಾರದ ಯಾವುದೇ ಸೌಲಭ್ಯ ನೀಡುವುದಿಲ್ಲ.

Gwalior Trade Fairನಲ್ಲಿ ಭಾಗವಹಿಸಿದ್ದ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೇ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಈ ಮಹಿಳೆಯರ ಪೀಡನೆ ಹೆಚ್ಚಾಗುತ್ತಿದೆ. ಆದ್ದರಿಂದ ಅದನ್ನು ನಿಯಂತ್ರಿಸಲು ಈ ಕ್ರಮಗಳು ಅನಿವಾರ್ಯವಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವವರ ಬಗ್ಗೆ ಮಾಹಿತಿ, ಅಂಕಿ-ಅಂಶಗಳನ್ನು ಸಿದ್ಧಪಡಿಸಲಾಗುತ್ತಿದೆ. ಅಂತಹ ಆರೋಪಿಗಳಿಗೆ ವಾಹನ ಚಾಲನಾ ಪರವಾನಿಗೆ, ಪಾಸ್‌ಪೋರ್ಟ್ ಸೇರಿದಂತೆ ಯಾವುದೇ ಸರಕಾರಿ ಸೌಲಭ್ಯಗಳನ್ನು ನೀಡುವುದಿಲ್ಲ ಮತ್ತು ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಲೈಂಗಿಕ ಕಿರುಕುಳ ಮತ್ತು ಅಸಭ್ಯವಾಗಿ ನಡೆದುಕೊಳ್ಳುವವರ ವಿರುದ್ಧ ದೂರು ನೀಡುವುದಕ್ಕೆ ನೆರವಾಗಲು ಸದ್ಯದಲ್ಲೇ ಉಚಿತ ಸಹಾಯವಾಣಿ ಕಾರ್ಯಾರಂಭಿಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+