ಪುತ್ತೂರು ಟಿಕೆಟ್ ಕೊಟ್ರೆ ನಾನು ರೆಡಿ : ಡಿವಿಎಸ್

DV Sadananda Gowda
ಪುತ್ತೂರು, ನ.23: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಾನು ಈ ತನಕ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ, ಪಕ್ಷದ ಹೈಕಮಾಂಡ್ ಬಯಸಿದರೆ ಪುತ್ತೂರಿನಲ್ಲಿ ವಿಧಾನಸಭೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಸೆ ಕೈಬಿಟ್ಟಿರುವ ಬಿಜೆಪಿ ವರಿಷ್ಠರು, ಸಾಮೂಹಿಕ ನಾಯಕತ್ವಕ್ಕೆ ಮಣೆ ಹಾಕಿರುವುದು ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಡಿವಿಎಸ್ ಹೇಳಿಕೆ ಮಹತ್ವದ್ದಾಗಿದೆ.

ಕೆಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್, ಅನಂತಕುಮಾರ್, ಪ್ರಹ್ಲಾದ್ ಜೋಶಿ ಹಾಗೂ ಸದಾನಂದ ಗೌಡ ಅವರ ನಾಯಕತ್ವದಲ್ಲಿ ಮುಂಬರುವ ಚುನಾವಣೆಯನ್ನು ಎದುರಿಸಲು ಬಿಜೆಪಿ ಮನಸ್ಸು ಮಾಡಿದೆ. ಶೆಟ್ಟರ್ ಸರ್ಕಾರ ಬಿದ್ದು, ಅಕಾಲಿಕವಾಗಿ ಚುನಾವಣೆ ಎದುರಾದರೆ ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ತಯಾರಿ ಕೂಡಾ ನಡೆದಿದೆ ಎನ್ನಲಾಗಿದೆ.

ಪಕ್ಷದಲ್ಲಿ ಶಿಸ್ತು ಮಾಯ: ಬಿಜೆಪಿ ಶಿಸ್ತಿನ ಪಕ್ಷ ಎಂಬುದು ಈಗ ಬದಲಾಗಿದೆ. ಕಳೆದ 3 ವರ್ಷಗಳಲ್ಲಿ ಅಲ್ಪಮಟ್ಟಿಗೆ ಶಿಸ್ತು ಕೈಮೀರಿರುವುದು ಒಪ್ಪಿಕೊಳ್ಳುವ ವಿಚಾರ. ಆದರೆ ಅದು ಪಕ್ಷದ ಹಿತದೃಷ್ಟಿಯಿಂದ ಅನಿವಾರ್ಯವಾಗಿತ್ತು. ಆದರೆ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಪಕ್ಷವಿರೋಧಿ ಕೆಲಸಗಳನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಸದಾನಂದ ಗೌಡ ಹೇಳಿದ್ದಾರೆ.

ಪಕ್ಷವು ಅಧಿಕಾರ ತ್ಯಜಿಸುವ ಪರಿಸ್ಥಿತಿ ಬಂದರೂ ಶಿಸ್ತಿಗೆ ಆದ್ಯತೆ ನೀಡಲಾಗುವುದು. ಬಿಜೆಪಿಯು ತನ್ನ ಎಲ್ಲಾ ಗೊಂದಲಗಳನ್ನು ಪರಿಹರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.

ಅವರು ಇತರ ಪಕ್ಷಗಳಲ್ಲಿ ನಮ್ಮ ಪಕ್ಷಕ್ಕಿಂತಲೂ ಹೆಚ್ಚಿನ ಗೊಂದಲಗಳಿರುವುದರಿಂದ ಜನರು ಮುಂದಿನ ಬಾರಿಯೂ ನಮ್ಮನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಕೆಜೆಪಿಗೆ ಬಿಜೆಪಿಯಿಂದ ಯಾವುದೇ ವ್ಯಕ್ತಿಗಳು ಹೋಗುತ್ತಿಲ್ಲ ಎಂಬ ನಂಬಿಕೆ ನಮಗಿದೆ ಎಂದ ಡಿ.ವಿ., ಅಶಿಸ್ತಿನ ಕಾರಣದಿಂದ ಪಕ್ಷದಿಂದ ಹೊರಹೋದವರು ಮತ್ತೆ ಸಿದ್ಧಾಂತದ ಆಧಾರದಲ್ಲಿ ಹಿಂದಿರುಗ ಬಯಸಿದರೆ ಅವರನ್ನು ಸ್ವಾಗತಿಸಲಾಗುವುದು ಎಂದು ಸದಾನಂದ ಗೌಡ ಹೇಳಿದರು.

ಮಾಣಿ ಸಂಪಾಜೆ ರಸ್ತೆ ಕಾಮಗಾರಿ 2013 ಎಪ್ರಿಲ್ ಅಂತ್ಯದೊಳಗೆ ಮುಗಿದು ಮೇ ತಿಂಗಳಲ್ಲಿ ಲೋಕಾರ್ಪಣೆಯಾಗುವ ಭರವಸೆ ಇದೆ.ಜಿಲ್ಲೆಗೆ ಈಗಾಗಲೇ ವಿವಿಧ ಅನುದಾನಗಳ ಮೂಲಕ 200 ಕೋಟಿ ಗೂ ಹೆಚ್ಚು ಅನುದಾನ ನೀಡಲಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+