ಬಿಜೆಪಿಯಿಂದ ಕೆಜೆಪಿಗೆ: ಮೊದಲ ತಲೆದಂಡ ಸನ್ನಿಹಿತ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಶಿಸ್ತುಕ್ರಮ ಎದುರಿಸ ಬೇಕಾಗುತ್ತದೆ ಎನ್ನುವುದನ್ನು ಅವರಿಗೆ ತೋರಿಸಲು ಅವರ ಆಪ್ತರೊಬ್ಬರ ತಲೆದಂಡಕ್ಕೆ ಬಿಜೆಪಿ ಮುಂದಾಗಿದೆ.
ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ತುರುವೇಕೆರೆಯ ಮಾಜಿ ಶಾಸಕ ಮತ್ತು ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ ಡಿ ಲಕ್ಷ್ಮೀನಾರಾಯಣ ಅವರನ್ನು ಆ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ ಸಜ್ಜಾಗಿದ್ದು ಈ ಸಂಬಂಧ ಇಂದು (ನ 24) ಅಥವಾ ಸೋಮವಾರ (ನ 26) ಅಧಿಕೃತ ಆದೇಶ ಹೊರಬೀಳಲಿದೆ ಎಂದು ವರದಿಯಾಗಿದೆ.
ಕರ್ನಾಟಕ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿಧಾನಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ ವಿಧಾನಪರಿಷತ್ ಸದಸ್ಯರಾಗಿ ನಾಮಕರಣಗೊಂಡ ಸಂದರ್ಭದಲ್ಲಿ ಬಿಜೆಪಿ ಸದಸ್ಯರಾಗಿರಲಿಲ್ಲ.
ಇದೇ ತಿಂಗಳ 9ರಂದು ಕರ್ನಾಟಕ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ ನೇಮಕಗೊಂಡರೂ ಕೈಮಗ್ಗ ನಿಗಮದ ಅಧ್ಯಕ್ಷರಾಗಿ ನಿರಾತಂಕವಾಗಿ ಮುಂದುವರಿದಿದ್ದರು.
ಕೊನೆಗೂ ಅವರ ಅಧ್ಯಕ್ಷ ಸ್ಥಾನ ಕಸಿದುಕೊಂಡು ಬಿಜೆಪಿ ಆಪ್ತರಿಗೆ ಸ್ಪಷ್ಟ ಎಚ್ಚರಿಕೆ ಸಂದೇಶ ನೀಡಲು ಬಿಜೆಪಿ ನಿರ್ಧರಿಸಿದೆ.
ಎಂ ಡಿ ಲಕ್ಷ್ಮೀನಾರಾಯಣ ಬಿಜೆಪಿಯಲ್ಲಿಲ್ಲ, ಆದರೂ ಕೈಮಗ್ಗ ಮಂಡಳಿಯ ಅಧ್ಯಕ್ಷ ಹುದ್ದೆಯನ್ನು ಉಳಿಸಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಈಶ್ವರಪ್ಪ ಈ ಹಿಂದೆ ಹೇಳಿಕೆ ನೀಡಿದ್ದರು.












Click it and Unblock the Notifications