ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಯೋಧ ಸಂದೀಪ್ ಉನ್ನಿಕೃಷ್ಣನ್ ಅಮರವಾಗಲಿ

By Mahesh
|
Google Oneindia Kannada News

Sandeep's statue unveiled in Bangalore
ಮುಂಬೈ, ನ.26: 2008ರ ನವೆಂಬರ್ 26ರಂದು ಮುಂಬೈ ಮೇಲೆ ಭಯೋತ್ಪಾದಕ ದಾಳಿ ನಡೆದ ಕರಾಳ ನೆನಪಿಗೆ ಇಂದು ನಾಲ್ಕನೇ ವರ್ಷ. ಜೊತೆಗೆ ಬೆಂಗಳೂರು ಮೂಲದ ಭಾರತದ ಹೆಮ್ಮೆಯ ಪುತ್ರ ವೀರಯೋಧ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾದ ದಿನವೂ ಹೌದು.

ಜೀವದ ಹಂಗುತೊರೆದು ತಾಜ್ ಹೋಟೆಲ್ ಬಳಿ ಉಗ್ರರು ನಡೆಸಿದ್ದ ದಾಳಿಯನ್ನು ಹತ್ತಿಕ್ಕಲು ಯತ್ನಿಸಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ನೆನಪು ಸದಾ ಇರುವಂತೆ ಮಾಡಲು ಯತೀಶ್ ಪ್ರಸಾದ್ ಚಾರಿಟಬಲ್ ಟ್ರಸ್ಟ್ ಅವರು ಬೆಂಗಳೂರಿನಲ್ಲಿ 26/11ರಂದೇ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ.

ನಗರದ ಹೊರವರ್ತುಲ ರಸ್ತೆಗೆ ಹೊಂದಿಕೊಂಡಿರುವ ರಾಮಮೂರ್ತಿ ನಗರದ ಸಿಗ್ನಲ್ ಸಮೀಪ ಎನ್ ಎಸ್ ಜಿ ಕಮಾಂಡೋ ಸಂದೀಪ್ ಅವರ ಪ್ರತಿಮೆ ಸ್ಥಾಪಿಸಲಾಗಿದೆ.

ರಣರಂಗದ ಹೊರಗಡೆ ಯೋಧನೊಬ್ಬ ತೋರುವ ಅಪ್ರತಿಮ ಸಾಹಸ, ಶೌರ್ಯ, ತ್ಯಾಗಕ್ಕಾಗಿ ನೀಡುವ 'ಅಶೋಕ ಚಕ್ರ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಜನವರಿ 26,2009ರಲ್ಲಿ ಸಂದೀಪ್ ಅವರಿಗೆ ಮರಣೋತ್ತರವಾಗಿ ಅಶೋಕ್ ಚಕ್ರ ನೀಡಲಾಗಿದೆ. ಸಂದೀಪ್ ಅವರ ಜೊತೆಗೆ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ, ಅಶೋಕ್ ಕಾಮ್ಟೆ, ವಿಜಯ್ ಸಲಾಸ್ಕರ್, ತುಕಾರಾಂ ಒಂಬಳೆ, ಗಜೇಂದರ್ ಸಿಂಗ್ ಅವರಿಗೂ ಮರಣೋತ್ತರ ಪ್ರಶಸ್ತಿ ಸಿಕ್ಕಿದೆ.

ಮುಂಬೈ ದಾಳಿಗೆ ಕಾರಣರಾದ ಎಲ್ಲಾ ಉಗ್ರರು ಅಂದೇ ಮೃತಪಟ್ಟಿದ್ದರು. ಸಿಕ್ಕಿ ಬಿದ್ದಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ನನ್ನು ಬಂಧಿಸಲಾಗಿತ್ತು. ಕಸಬ್ ಗೆ ನ.21 ಪುಣೆಯ ಯರವಾಡ ಜೈಲಿನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ಕರಾಳ ನೆನಪು:2008ರ ನವೆಂಬರ್ 26ರಂದು ಪಾಕಿಸ್ತಾನದ ಹತ್ತು ಉಗ್ರರು ಭಾರತದೊಳಗೆ ಸಮುದ್ರದ ಮುಖಾಂತರ ನುಸುಳಿ 166 ಜನರನ್ನು ಹತ್ಯೆಗೈದಿದ್ದರು.

ಮುಂಬೈನ ಪ್ರತಿಷ್ಠಿತ ತಾಜ್ ಮಹಲ್ ಪ್ಯಾಲೇಸ್ ಹೋಟೆಲಿನಲ್ಲಿ ಇದ್ದರ ಜನರನ್ನು ಪಾರು ಮಾಡಲು ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ ಕಮಾಂಡೋ ಆಗಿದ್ದ ಸಂದೀಪ್ ಉನ್ನಿಕೃಷ್ಣನ್ ಅವರು ಹೋದಾಗ ಉಗ್ರರ ಜೊತೆ ಹೋರಾಡುತ್ತಲೇ ಮಡಿದಿದ್ದರು.

ಭಯೋತ್ಪಾದಕ ಸಿಡಿಸಿದ ಗುಂಡು ಸಂದೀಪ್ ಗುಂಡಿಗೆಯನ್ನು ಹೊಕ್ಕಿದ್ದಾಗ, "ದಯವಿಟ್ಟು ಮೇಲೆ ಯಾರೂ ಬರಬೇಡಿ, ನಾನೊಬ್ಬನೇ ಅವರನ್ನು ಎದುರಿಸುತ್ತೇನೆ" ಎಂಬ ಸಂದೇಶ ರವಾನಿಸಿದ್ದಾಗಿ ಎನ್ಎಸ್‌ಜಿ ಅಧಿಕಾರಿಗಳು ಸಂದೀಪ್ ಅವರನ್ನು ನೆನೆಸಿಕೊಳ್ಳುತ್ತಾರೆ. ತಾಜ್ ಮಹಲ್ ಪ್ಯಾಲೇಸಿನಲ್ಲಿ ಏಕಾಂಗಿಯಾಗಿ ಉಗ್ರರ ಹಿಡಿತಕ್ಕೆ ಸಿಕ್ಕು ಸಂದೀಪ್ ಹೋರಾಡುತ್ತಲೇ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದರು.

ಮುಂಬೈ ದಾಳಿಯಲ್ಲಿ ಮೃತಪಟ್ಟ ಹುತಾತ್ಮರಿಗೆ ನವೆಂಬರ್ 26, 2012ರಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್, ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೇ ಸೇರಿದಂತೆ ಅನೇಕ ಗಣ್ಯರು ಮುಂಬೈನ ನಾರಿಮನ್ ಹೌಸ್ ನಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

2008ರ ಮುಂಬಯಿ ದಾಳಿಯಲ್ಲಿ ಉಗ್ರರ ಗುಂಡೇಟಿಗೆ ವೀರಮರಣವಪ್ಪಿದ್ದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಅಪ್ರತೀಮ ದೇಶಭಕ್ತ ಮಾತ್ರವಲ್ಲ ಕೊಡುಗೈ ದಾನಿಯಾಗಿದ್ದ. ಸೇನೆಯಲ್ಲಿ 9 ವರ್ಷ ಉನ್ನತ ಹುದ್ದೆ ಅಲಂಕರಿಸಿದ್ದರೂ ಬಂದ ಸಂಬಳವನ್ನೆಲ್ಲ ದೀನ ದಲಿತರಿಗೆ ಹಂಚಿಬಿಡುತ್ತಿದ್ದ ಎಂದು ಸಂದೀಪ್ ಕುಟುಂಬದ ಮೂಲಗಳು ಹೇಳಿದೆ.

ಸಂದೀಪ್ ರನ್ನು ತುಂಬಾ ಪ್ರೀತಿಸುತ್ತಿದ್ದ ಆತನ ಚಿಕ್ಕಪ್ಪ ಮೋಹನನ್ ಅವರು ತೀವ್ರವಾಗಿ ನೊಂದು ಕೊಂಡಿದ್ದರು. ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡು ದುರಂತ ಸಾವನ್ನಪ್ಪಿದ್ದರು.

ಸಂದೀಪ್ ಅಪ್ಪ ನಿವೃತ್ತ ಇಸ್ರೋ ಅಧಿಕಾರಿ ಉನ್ನಿಕೃಷ್ಣನ್ ಹಾಗೂ ತಾಯಿ ಧನಲಕ್ಷ್ಮಿ ಅವರು ' ನಮಗೆ ಮಗನನ್ನು ಕಳೆದುಕೊಂಡ ದುಃಖಕ್ಕಿಂತ ವೀರಪುತ್ರನನ್ನು ನಾಡಿಗೆ ನೀಡಿದ ಹೆಮ್ಮೆಯಿದೆ ಎಂದು ಹೇಳುತ್ತಾರೆ. ಆತನ ಸಾವಿನ ನಂತರ ಯಾವುದೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ನಮಗೆ ಆಸಕ್ತಿಯಿಲ್ಲ. ಆತನ ನೆನೆಪೇ ನಮ್ಮ ಮುಂದಿನ ಜೀವನವನ್ನು ಸಾಗಿಸುತ್ತದೆ ಎಂದು ಹೇಳುವಾಗ ಅವರ ಕಣ್ಣಾಲಿಗಳು ತುಂಬಿಬಂದಿದ್ದವು.

English summary
As India observed the 4th anniversary of Mumbai Terror Attacks 2008, a statue of National Security Guards (NSG) commando Sandeep Unnikrishnan was unveiled in Bangalore on Monday, Nov 26.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X