ನ29 ರಂದು 3 ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಬೇಡಿ

Three National Highways bundh on Nov 29
ಬೆಂಗಳೂರು, ನ 26: ಡಾ.ಜಿ ಎಸ್ ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಮೂರು ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ನವೆಂಬರ್ 29ರಂದು ಬಂದ್ ಮಾಡಲು ನೀರಾವರಿ ಹೋರಾಟಗಾರರು ನಿರ್ಧರಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಹೋರಾಟವನ್ನು ತೀವ್ರಗೊಳಿಸಲು ಈ ಮೂರು ಜಿಲ್ಲೆಗಳ ನೀರಾವರಿ ಹೋರಾಟಗಾರು ನಿರ್ಧರಿಸಿದ್ದಾರೆ.

ಗುರುವಾರ (ನ 29) ದಂದು ಹೋರಾಟಗಾರರು ನಡೆಸಲು ಉದ್ದೇಶಿಸಿರುವ ಈ ಹೋರಾಟಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನದ ಕಾರ್ಯದರ್ಶಿ ಸೇರಿ ಎಂಟು ಮಂದಿ ಸ್ವಾಮೀಜಿಗಳು ಹೋರಾಟದಲ್ಲಿ ಭಾಗವಹಿಸಿ ಬೆಂಬಲಿಸಲಿದ್ದಾರೆ.

ಈ ಮೂರು ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಕಳೆದ 54 ದಿನಗಳಿಂದ ಹೋರಾಟಗಾರರು ನಿರಂತರ ಧರಣಿ ನಡೆಸುತ್ತಿದ್ದಾರೆ. ಹೆದ್ದಾರಿ ಬಂದ್, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಾರ್ಗ ಬಂದ್, ಜೈಲ್ ಭರೋ ಸೇರಿದಂತೆ ವಿವಿಧ ಹೋರಾಟಗಳನ್ನು ನಡೆಸಲು ಹೋರಾಟಗಾರರು ನಿರ್ಧರಿಸಿದ್ದಾರೆ.

ಹೀಗಾಗಿ ಮೂರು ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತ ಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಮೂರು ಜಿಲ್ಲಾ ವ್ಯಾಪ್ತಿಯಲ್ಲಿ ಸಾಗುವ ರಾಷ್ಟ್ರೀಯ ಹೆದ್ದಾರಿಗಳು:
NH 209 - ಬೆಂಗಳೂರು ಗ್ರಾಮಾಂತರ
NH 234 - ಚಿಕ್ಕಬಳ್ಳಾಪುರ, ಕೋಲಾರ
NH 4 - ಬೆಂಗಳೂರು ಗ್ರಾಮಾಂತರ, ಕೋಲಾರ
NH 48 - ಬೆಂಗಳೂರು ಗ್ರಾಮಾಂತರ
NH 7 - ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+