ಭದ್ರಾ ಮೇಲ್ದಂಡೆ ಹಗರಣ : ಬಿಎಸ್ ವೈ ಗೆ ಜಾಮೀನು

ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಎವೈ ರಾಘವೇಂದ್ರ, ವಿಜಯೇಂದ್ರ ಹಾಗೂ ಅಳಿಯ ಸೋಹನ್ ಕುಮಾರ್ ಅವರಿಗೂ ಜಾಮೀನು ಮಂಜೂರಾಗಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ [B-report: When police have filed a B report you will have to file an objections and you will have to lead your evidence to get issue summons to the accused.-ವಕೀಲ ರಾಜೀವ್] ನಲ್ಲಿ ಯಡಿಯೂರಪ್ಪ ಅವರನ್ನು ನಿರ್ದೋಷಿ ಎಂದು ನಮೂದಿಸಲಾಗಿತ್ತು.
ಇದಕ್ಕೆ ವೈಎಸ್ ವಿ ದತ್ತಾ ಪರ ವಕೀಲ ಪಿ.ಎನ್.ಹೆಗಡೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲು ಕಷ್ಟ. ಪ್ರಕರಣದ ಬಗ್ಗೆ ಮರು ತನಿಖೆ ನಡೆಸಿ ಹೊಸದಾಗಿ ಬಿ ರಿಪೋರ್ಟ್ ಸಲ್ಲಿಸುವಂತೆ' ಲೋಕಾಯುಕ್ತ ಕೋರ್ಟ್ ಆದೇಶಿಸಿತ್ತು.
ಲೋಕಾಯುಕ್ತ ತನಿಖಾಧಿಕಾರಿ ಡಿವೈಎಸ್ ಪಿ ಗಿರೀಶ್ ಎಸ್ ಅವರು ಆರ್ ಎನ್ ಎಸ್ ಇನ್ಫ್ರಾ ಸ್ಟಕ್ಚರ್ ಲಿ. ನೀಡಿರುವ ಗುತ್ತಿಗೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿ ನೀಡಿದ್ದರು.
ಭದ್ರಾ ಮೇಲ್ದಂಡೆ ಕಾಮಗಾರಿ ಎರಡನೇ ಹಂತದ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದ್ದು, ಯಡಿಯೂರಪ್ಪ ಅವರು ತಮಗೆ ಬೇಕಾದವರಿಗೆ ಗುತ್ತಿಗೆ ನೀಡಿ 16 ಕೋಟಿ ಲಂಚ ಪಡೆದಿದ್ದಾರೆ ಎಂದು ಜೆಡಿಎಸ್ ವಕ್ತಾರ ವೈಎಸ್ ವಿ ದತ್ತಾ ಅವರು ಲೋಕಾಯುಕ್ತದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಧಿಕ ಮೊತ್ತದ ಬಿಡ್ ಸಲ್ಲಿಸಿದ್ದ ಕಂಪನಿಗೆ (RNS Infrastructure) ಟೆಂಡರ್ ಅನುಮೋದಿಸುವ ಮುನ್ನ ಆ ಕಂಪನಿಯಿಂದ ಯಡಿಯೂರಪ್ಪ ಕುಟುಂಬದವರ ಕಂಪನಿಗೆ (Dhavalgiri Properties and Sahyadri Healthcare) ಲಂಚ ಸಂದಾಯವಾಗಿದೆ ಎಂಬುದು ಪ್ರಕರಣದ ಪ್ರಮುಖ ದೂರಾಗಿದೆ.
ಈ ಪ್ರಕರಣದಲ್ಲಿ ಆರ್ ಎನ್ ಎಸ್ ಇನ್ಫಾಸ್ಟಕ್ಚರ್ ಲಿ. ಜ್ಯೋತಿ ಲಿ. ಧವಳಗಿರಿ ಪ್ರಾಪರ್ಟೀಸ್, ಸಹ್ಯಾದ್ರಿ ಹೆಲ್ತ್ ಕೇರ್ ಮುರುಡೇಶ್ವರ ಎಂಟರ್ ಪ್ರೈಸರ್ ಸಂಸ್ಥೆಗಳ ಮೇಲೆ ಆರೋಪವಿದೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications