ಶಿವಮೊಗ್ಗದಲ್ಲಿ ಬಿಎಸ್ ವೈಗೆ ಶೆಟ್ಟರ್ ಟಾಂಗ್

Jagadish Shettar in Shimoga
ಶಿವಮೊಗ್ಗ, ಡಿ.2: ಬಿಜೆಪಿ ವ್ಯಕ್ತಿಗತ ಪಕ್ಷವಲ್ಲ. ಕಾರ್ಯಕರ್ತರ ಪಕ್ಷ. ಯಾರೇ ಪಕ್ಷ ತೊರೆದವರು ಅವರು ಜೀರೋ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾನುವಾರ (ಡಿ.2) ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ನಾವು ಹೆದರಬೇಕಾಗಿಲ್ಲ. ರಾಜ್ಯದಲ್ಲಿ ಇರುವುದು ಒಂದೇ ವಿರೋಧ ಪಕ್ಷ ಅದು ಕಾಂಗ್ರೆಸ್ ಎಂದು ಶೆಟ್ಟರ್ ಹೇಳಿದರು.

ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಭಿನ್ನಾಭಿಪ್ರಾಯವಿಲ್ಲ. ಈಗಲೂ ನಿಷ್ಠಾವಂತ ಕಾರ್ಯಕರ್ತರ ಪಡೆ ನಮ್ಮೊಂದಿಗಿದೆ. ಬಿಜೆಪಿಯಲ್ಲಿ ಬಿಕ್ಕಟ್ಟು ಇಲ್ಲ. ಸರ್ಕಾರ ಸಬಲವಾಗಿದೆ. ನನ್ನ ಅವಧಿಯಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇನೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿ, ಗೊಂದಲಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಶೆಟ್ಟರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.

ಚುನಾವಣೆಗೆ ಸಿದ್ಧರಾಗಿ: ಈ ನಡುವೆ ಸಭೆಯಲ್ಲಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದ ಅನಂತಕುಮಾರ್ ಅವರು, ಚುನಾವಣೆಗೆ ಸಿದ್ಧರಾಗಿರಿ ಎಂದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯಾವ ಕಾರಣಕ್ಕೆ ಬಿಜೆಪಿ ಬಿಟ್ಟರೋ ಗೊತ್ತಿಲ್ಲ ಎಂದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರಿಗೆ ಬಲ ತುಂಬಲು ಪದಾಧಿಕಾರಿಗಳ ಸಭೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಸದ ಅನಂತಕುಮಾರ್ ಹಾಗೂ ರಾಜ್ಯಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ಭಾಗಿಯಾಗಿದ್ದಾರೆ.

ಇದಕ್ಕೂ ಮುನ್ನ, ನಾನೇ ಸ್ಥಾಪಿಸಿದ ಸರ್ಕಾರವನ್ನು ಉರುಳಿಸುವ ಉದ್ದೇಶ ನನಗಿಲ್ಲ. ಆದರೆ, ಬಿಜೆಪಿ ವರಿಷ್ಠರಿಗೆ ಸರ್ಕಾರ ಇರುವುದು ಇಷ್ಟವಿಲ್ಲದಿದ್ದರೆ ಉರುಳಿಸಲಿ ಎಂದು ಕೆಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕಿಡಿಕಾರಿದ್ದರು

ಹಾವೇರಿ ಸಮಾವೇಶಕ್ಕೆ ಬರುವ ಶಾಸಕರು, ಸಚಿವರ ವಿರುದ್ಧವೂ ಬಿಜೆಪಿ ಕ್ರಮ ಕೈಗೊಳ್ಳಲಿ. ಶೆಟ್ಟರ್ ಸರ್ಕಾರ ಆತ್ಮಹತ್ಯೆಗೆ ವರಿಷ್ಠರು ನಾಂದಿ ಹಾಡಲಿ ಎಂದು ಯಡಿಯೂರಪ್ಪ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+