ಶ್ವೇತಾಗೆ ಛಂದ 'ಮುಖಪುಟ ವಿನ್ಯಾಸ' ಬಹುಮಾನ

ಕಥೆಗಾರ ವಸುಧೇಂದ್ರ ಅವರ ಸುಲಲಿತ ಪ್ರಬಂಧಗಳ ಸಂಕಲನ 'ವರ್ಣಮಯ' ಪುಸ್ತಕಕ್ಕೆ ಮುಖಪುಟ ವಿನ್ಯಾಸ ರಚಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಚುಕ್ಕುಬುಕ್ಕು ಕನ್ನಡ ಪೋರ್ಟಲ್ ಈ ಸ್ಪರ್ಧೆಗೆ ಛಂದ ಪುಸ್ತಕ ಪ್ರಕಾಶನದೊಡನೆ ಕೈ ಜೋಡಿಸಿತ್ತು.
ಡಿಸೆಂಬರ್ 16ರಂದು ಬಿಡುಗಡೆಯಾಗಲಿರುವ ವಸುಧೇಂದ್ರರ 'ವರ್ಣಮಯ' ಎಂಬ ಸುಲಲಿತ ಪ್ರಬಂಧ ಸಂಕಲನಕ್ಕೆ ಈ ಮುಖಪುಟವನ್ನು ಬಳಸಿಕೊಳ್ಳಲಾಗುವುದು. ಶ್ವೇತಾರವರಿಗೆ 5,000 ರುಪಾಯಿ ಬಹುಮಾನ ಮತ್ತು ಪ್ರಶಸ್ತಿ ಫಲಕವನ್ನು ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಶ್ವೇತಾ, ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಎಂಎಫ್ಎ ಅನ್ವಯಕಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕ್ಯಾಮೆರಾ ಹೊತ್ತು ಸುತ್ತುವುದನ್ನು ತುಂಬಾ ಇಷ್ಟಪಡುವ ಶ್ವೇತಾ ಆಡುಕಳ ಅವರು ಪದವಿ ಮುಗಿಸಿದ್ದು ಮೈಸೂರಿನ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿಯಲ್ಲಿ.
150ಕ್ಕೂ ಹೆಚ್ಚು ವಿನ್ಯಾಸಗಳ ತೀವ್ರ ಪೈಪೋಟಿಯ ಈ ಛಂದ ಮುಖಪುಟ ವಿನ್ಯಾಸ ಸ್ಪರ್ಧೆಯ ತೀರ್ಪು ನೀಡಿರುವುದು ನಾಡಿನ ಖ್ಯಾತ ಕಲಾವಿದ ಪ.ಸ. ಕುಮಾರ್ರವರು. ವಸುಧೇಂದ್ರ ಅವರ ಹೊಸ ಪುಸ್ತಕ ವರ್ಣಮಯ ಡಿ.16ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. ಅಂದೇ ಶ್ವೇತಾ ಅವರಿಗೆ ಬಹುಮಾನವನ್ನೂ ವಿತರಿಸಲಾಗುವುದು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications