ಬೆಂಗಳೂರಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ?

Minor girl allegedly gang-raped in Bangalore
ಬೆಂಗಳೂರು, ಡಿ. 19 : ದೆಹಲಿಯಲ್ಲಿ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರದ ಬಗ್ಗೆ ಇಡೀ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿ, ಅತ್ಯಾಚಾರಿಗಳಿಗೆ ಮರಣ ದಂಡನೆ ನೀಡಬೇಕೆಂಬ ಕೂಗು ಕೇಳಿಬಂದಿರುವ ಸಂದರ್ಭದಲ್ಲಿ, ಅತ್ಯಾಚಾರ ನಗರಿಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಬೆಂಗಳೂರಿನಲ್ಲಿ ಇಂತಹ ಹೀನ ಕೃತ್ಯ ಜರುಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಬೆಂಗಳೂರಿನ ಕಾಡುಗೋಡಿಯ ಪಟಾಲಮ್ಮ ಬಡಾವಣೆಯಲ್ಲಿ ಮಂಗಳವಾರ ರಾತ್ರಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ದುರುಳರು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಬಾಲಕಿಯ ಪಾಲಕರು ಆರೋಪಿಸಿದ್ದಾರೆ. ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿರುವ ಓರ್ವನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ.

ಇಲ್ಲಿ ಬಂದು ಗಾರೆ ಕೆಲಸ ಮಾಡುತ್ತಿದ್ದ ಗುಲಬರ್ಗ ಮೂಲದ ದಂಪತಿಗಳು ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಇಬ್ಬರನ್ನು ಪೊಲೀಸರು ಹುಡುಕುತ್ತಿದ್ದಾರೆ.

14 ವರ್ಷದ ಹಸೀನಾ (ಹೆಸರು ಬದಲಿಸಲಾಗಿದೆ) ಮಂಗಳವಾರ ರಾತ್ರಿ ಮನೆ ಬಳಿಯಿದ್ದ ಅಂಗಡಿಗೆ ಹೋಗಿದ್ದಾಗ ಈ ಹೇಯ ಕೃತ್ಯವನ್ನು ಕಾಮುಕರು ಎಸಗಿದ್ದಾರೆ. ಅಂಗಡಿಗೆ ಬಂದಿದ್ದಾಗ ಆಕೆಯನ್ನು ಅಂಡಗಿಯೊಳಗೆ ಎಳೆದುಕೊಂಡ ಹೋದ ಅಶ್ವತ್ಥ ಮತ್ತಿಬ್ಬರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+