ಜಗನ್ ಮುಂದಿನ ಸಿಎಂ ಎಂದ ಕೆಎಂಎಫ್ ರೆಡ್ಡಿ

ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಎಷ್ಟೇ ಕುತಂತ್ರಗಳನ್ನು ಮಾಡಿ ಜನಾರ್ದನರೆಡ್ಡಿ ಮತ್ತು ಜಗನ್‌ಮೋಹನ್‌ರೆಡ್ಡಿಯನ್ನು ಜೈಲಿನಲ್ಲಿಟ್ಟರೂ ಅವರ ಚೈತನ್ಯವನ್ನು ತಡೆಯಲಾಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಎಚ್ಚರಿಸಿದರು.
ಬಳ್ಳಾರಿ ರೆಡ್ಡಿ ಸೋದರರು ಹಾಗೂ ಶ್ರೀರಾಮುಲು ಅವರ ಏಳಿಗೆಯನ್ನು ಸಹಿಸದ ಬಿಜೆಪಿ ಹೈ ಕಮಾಂಡ್ ನ ಕೆಲವು ನಾಯಕರು ಭಾರಿ ಕುತಂತ್ರ ನಡೆಸಿದರು.
ರಾಜ್ಯ ಹಾಗೂ ಕೇಂದ್ರದ ಇತರ ಮುಖಂಡರು ಮೈನಿಂಗ್ ಮಾಫಿಯಾದ ಲಾಭ ಪಡೆದವರೇ ಆಗಿದ್ದಾರೆ. ಆದರೆ, ಜನಾದರ್ನರೆಡ್ಡಿ ಮಾತ್ರ ಅವರ ಕಣ್ಣಿಗೆ ಕಾಣಿಸಿದ್ದು ಎಂದರೆ ಯಾವ ರೀತಿ ತಂತ್ರ ಮಾಡಿದ್ದರು ಎಂಬುದನ್ನು ಗಮನಿಸಬಹುದು.
ರಾಜ್ಯ ಹಾಗೂ ಕೇಂದ್ರದ ಇತರ ಮುಖಂಡರು ಮೈನಿಂಗ್ ಮಾಫಿಯಾದ ಲಾಭ ಪಡೆದವರೇ ಆಗಿದ್ದಾರೆ. ಆದರೆ, ಜನಾದರ್ನರೆಡ್ಡಿ ಮಾತ್ರ ಕಣ್ಣಿಗೆ ಕಾಣಿಸಿದ್ದು ಅವರ ಮೇಲೆ ನಡೆದ ಕುತಂತ್ರವೇ ಸರಿ ಎಂದು ಸರಕಾರಗಳ ಕ್ರಮವನ್ನು ಅವರು ಖಂಡಿಸಿದರು.
ಜಗನ್ ಸೂಪರ್ ಪವರ್: ಆಂಧ್ರಪ್ರದೇಶದಲ್ಲಿ ವೈಎಸ್‌ಆರ್ ಪಕ್ಷದ ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿ ಅವರು ಜೈಲಿನಲ್ಲಿದ್ದರೂ ಜನರ ಮನಸ್ಸಿನಿಂದ ದೂರಾಗಿಲ್ಲ.
ಕಳೆದ ಚುನಾವಣೆಯಲ್ಲಿ 18 ಸ್ಥಾನಗಳಲ್ಲಿ ಹದಿನೈದು ಸ್ಥಾನಗಳನ್ನು ಗೆದ್ದು ಜನಪ್ರಿಯತೆ ಸಾಬೀತು ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲೂ ಜಯಭೇರಿ ಬಾರಿಸಿ ಆಂಧ್ರದ ಮುಂದಿನ ಮುಖ್ಯಮಂತ್ರಿಯಾಗಿ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಅಧಿಕಾರ ಪಟ್ಟಕ್ಕೇರುವುದು ಖಚಿತ ಎಂದು ಹೇಳಿದರು.
ಕಳೆದ ವರ್ಷ ಮೃತಪಟ್ಟ ಅನೇಕಲ್ ತಾಲೂಕಿನ ಮರಸೂರಿನ ರಮೇಶ್‌ರೆಡ್ಡಿ ನೆನಪಿನ ಸಭೆಯಲ್ಲಿ ಭಾಗವಹಿಸಿ ಸೋಮಶೇಖರ ರೆಡ್ಡಿ ಮಾತನಾಡಿದರು.
ಪ್ರಾದೇಶಿಕ ಪಕ್ಷ ಮುಖ್ಯ: ಬಳ್ಳಾರಿಯಲ್ಲಿ ಸ್ವಾಭಿಮಾನಿ ಶ್ರೀರಾಮುಲು ಅವರು ಗೆಲ್ಲುವ ಮೂಲಕ ಬಿಜೆಪಿ ನಾಯಕರಿಗೆ ತಕ್ಕ ಉತ್ತರ ನೀಡಿದ್ದಾರೆ. ಬಡವರ ಶ್ರಮಿಕರ ಮತ್ತು ರೈತರ ಪರವಾಗಿ ನಿಲ್ಲಬಲ್ಲ ನಾಯಕರಾಗಿ ಬೆಳೆದಿದ್ದಾರೆ. ಅವರ ಮೇಲೆ ಜನಾರ್ದನ ರೆಡ್ಡಿ ಅವರ ಆಶೀರ್ವಾದ ಸದಾಕಾಲ ಇರುತ್ತದೆ.
ಜಗನ್ ರೆಡ್ಡಿಯಂತೆ ಜೈಲಿನಲ್ಲಿದ್ದರೂ ಜನಾರ್ದನ ರೆಡ್ಡಿ ಅವರ ಪ್ರಭಾವದಿಂದ ಮುಂದಿನ ಚುನಾವಣೆಯಲ್ಲಿ ಭರ್ಜರಿ ಯಶಸ್ಸು ಪಡೆಯುತ್ತೇವೆ. ಬಿಎಸ್ ಆರ್ ಕಾಂಗ್ರೆಸ್ ಪಕ್ಷ ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ.
ಈಗ ಪ್ರಾದೇಶಿಕ ಪಕ್ಷಗಳದ್ದೇ ಕಾಲ. ಆದರೆ, ಬಿಎಸ್ ಆರ್ ಕಾಂಗ್ರೆಸ್ ಪಕ್ಷ ಯಾವುದೇ ಬೇರೆ ಪಕ್ಷಗಳ ಜೊತೆ ಹೊಂದಾಣಿಕೆ ಬಗ್ಗೆ ಈ ಸಮಯಕ್ಕೆ ಯೋಚಿಸಿಲ್ಲ. ಮುಂದಿನ ಕಾರ್ಯತಂತ್ರದ ಬಗ್ಗೆ ಸಮಯ ಬಂದಾಗ ನಿರ್ಧರಿಸಲಾಗುವುದು ಎಂದು ಸೋಮಶೇಖರ ರೆಡ್ಡಿ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications