ಮತ್ತದೇ ಪೀಡನೆ: ಚಲಿಸುತ್ತಿದ್ದ ಕಾರಿನಲ್ಲಿ ಗ್ಯಾಂಗ್ ರೇಪ್

ಜೈಪುರದಿಂದ ದೆಹಲಿಗೆ ಕಾರಿನಲ್ಲಿ ಆಗಮಿಸುತ್ತಿದ್ದ ವೇಳೆ ಮಹಿಳೆಯ ಮೇಲೆ ಈ ಸಾಮೂಹಿಕ ಅತ್ಯಾಚಾರ ನಡೆದಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಡ್ರಾಪ್ ನೀಡುವ ನೆಪದಲ್ಲಿ 42 ವರ್ಷದ ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದು ದೆಹಲಿಯ ದಕ್ಷಿಣ ಭಾಗದಲ್ಲಿ ಕಾಲ್ಕಾಜಿ ಸಮೀಪ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿರುವ ಮಹಿಳೆಯನ್ನು ಏಮ್ಸ್ ಆಸ್ಪತ್ರೆಗೆ (AIIMS) ದಾಖಲಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಉತ್ತರ ಪ್ರದೇಶದಲ್ಲಿಯೇ ಮಹಿಳೆಗೆ ಮತ್ತುಬರಿಸುವ ಔಷದ ನೀಡಿ, ಗ್ಯಾಂಗ್ ರೇಪ್ ಮಾಡಲಾಗಿದೆ. ಬಳಿಕ ಆಕೆಯನ್ನು ದೆಹಲಿಯಲ್ಲಿ ಬಿಸಾಡಲಾಗಿದೆ. ಸದರಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ.
ಮಹಿಳೆ ಜೈಪುರದವರು ಎನ್ನಲಾಗಿದೆ. ಆರೋಪಿಗಳು ಮಹಿಳೆಗೆ ಪರಿಚಿತರಾಗಿರಬಹುದು ಎಂದು ಶಂಕಿಸಲಾಗಿದೆ. ಬುಧವಾರ ರಾತ್ರಿ 9.15ರಲ್ಲಿ ಮಹಿಳೆಯೊಬ್ಬರು ರಸ್ತೆಯಲ್ಲಿ ಬಿದ್ದಿರುವುದನ್ನು ಕಂಡ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದಾಗ ಅತ್ಯಾಚಾರ ವಿಷಯ ತಿಳಿದುಬಂದಿದೆ.
ಬಾಧಿತ ಮಹಿಳೆಗೆ ಪರಿಚಯವಿದ್ದ ದಿಲೀಪ್ ವರ್ಮಾ ಎಂಬ ವ್ಯಕ್ತಿ ವೃಂದಾವನದಲ್ಲಿ ಆಕೆಯನ್ನು ಭೇಟಿಯಾಗಿ ಕಾರಿನಲ್ಲಿ ಕರೆದೊಯ್ಯುವುದಾಗಿ ತಿಳಿಸಿದ್ದಾನೆ. ಬಳಿಕ ಮತ್ತಿಬ್ಬರು ಸ್ನೇಹಿತರ ಜತೆಗೂಡಿ ಮಾರ್ಗ ಮಧ್ಯೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.












Click it and Unblock the Notifications