ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಸೂಕ್ತ :ಸಚಿವ ಸೋಮಣ್ಣ

ವಿರೋಧಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಲು ಅತ್ಯಂತ ಸೂಕ್ತ ಅಭ್ಯರ್ಥಿ ಎಂದು ವಸತಿ ಸಚಿವ ವಿ ಸೋಮಣ್ಣ ಆಶ್ಚರ್ಯಕಾರಿ ಹೇಳಿಕೆ ನೀಡಿದ್ದಾರೆ.
1996ರಲ್ಲಿ ಜೆಡಿಎಸ್ ಸರಕಾರವಿದ್ದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದೆ. ನಾನೇ ಮುಂದೆ ನಿಂತು 26 ಶಾಸಕರ ಸಹಿ ಸಂಗ್ರಹಿಸಿದ್ದೆ ಎಂದು ಸೋಮಣ್ಣ ಹೇಳಿದ್ದಾರೆ.
ಕರ್ನಾಟಕ ಕುರುಬ ಜಾಗೃತ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸೋಮಣ್ಣ, ಈ ರಾಜ್ಯ ಕಂಡ ಅತ್ಯಂತ ಅಪರೂಪದ ರಾಜಕಾರಿಣಿ ಸಿದ್ದರಾಮಯ್ಯ.
ಇವರು ಬರೀ ಕುರುಬ ಜನಾಂಗಕ್ಕೆ ಸೀಮಿತ ಎನ್ನುವುದು ತಪ್ಪು ಕಲ್ಪನೆ ಎಂದು ಸೋಮಣ್ಣ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.
ನಾನು ಸಿದ್ದರಾಮಯ್ಯ ಅವರನ್ನು ಹತ್ತಿರದಿಂದ ಬಲ್ಲೆ. ದೇವರು ಕೆಲವರಿಗೆ ತಡವಾಗಿ ಆಶೀರ್ವಾದ ಮಾಡುತ್ತಾನೆ
ಸಿದ್ದುಗೆ ಈ ಬಾರಿಯ ಚುನಾವಣೆಯಲ್ಲಿ ದೇವರು ಆಶೀರ್ವಾದ ಮಾಡಿ ಅವರು ಮುಖ್ಯಮಂತ್ರಿಯಾಗಲಿ ಎನ್ನುವುದು ನನ್ನ ಆಸೆ ಎಂದು ಸೋಮಣ್ಣ ಹೇಳಿದ್ದಾರೆ.












Click it and Unblock the Notifications