ಶೋಭಾ ಕರಂದ್ಲಾಜೆಗೆ ಎಚ್ ಡಿ ಕುಮಾರಸ್ವಾಮಿ ಸವಾಲು

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸುದೀರ್ಘ ಪತ್ರ ಬರೆದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅದರಲ್ಲೂ ಹೆಣ್ಣು ಮಕ್ಕಳ ರಕ್ಷಣೆ ಹೇಗೆ ನಡೆಯುತ್ತದೆ ಎಂಬುದನ್ನು ಸಚಿವೆ ಶೋಭಾ ಅವರು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ. ಇದು ಸರಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ.
ರಾಜ್ಯದಲ್ಲಿ ಬಿಜೆಪಿ ಆಡಳಿತ ಸಂಪೂರ್ಣ ಕುಸಿದಿದೆ ಎಂಬುದನ್ನು ಸಂಪುಟ ಸದಸ್ಯರೇ ಹೀಗೆ ಎತ್ತಿ ತೋರಿಸಿದ್ದಾರೆ. ಇದು ನಿಜಕ್ಕೂ ಶೋಚನೀಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದು ಮುಖ್ಯಮಂತ್ರಿಯ ವೈಫಲ್ಯವೂ ಹೌದು. ಜತೆಗೆ ಸಂಪುಟದಲ್ಲಿ ಏಕೈಕ ಮಹಿಳಾ ಸದಸ್ಯೆಯಾಗಿ ಶೋಭಾ ಕರಂದ್ಲಾಜೆ ಅವರ ಸೋಲೂ ಹೌದು. ಹಾಗಾಗಿ ತಾಕತ್ತಿದ್ದರೆ ಅವರು ತಕ್ಷಣ ಸಂಪುಟಕ್ಕೆ ರಾಜೀನಾಮೆ ನೀಡಲಿ ಎಂದು ಎಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.












Click it and Unblock the Notifications