ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ರಿಲೀಫ್

ಬೆಂಗಳೂರು, ಜ.10: ಪ್ರಚೋದನಾಕಾರಿ ಭಾಷಣ, ಕೋಮು ಸಾಮರಸ್ಯ ಕದಡಿದ ಆರೋಪ ಹೊತ್ತಿದ್ದ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ಬುಧವಾರ(ಜ.9) ರಿಲೀಫ್ ನೀಡಿದೆ.

ಪ್ರಚೋದನಾಕಾರಿ ಭಾಷಣ ಮಾಡಿ, ಕೋಮು ಸೌಹಾರ್ದತೆ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘ-ಪರಿವಾರದ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ಹೈಕೋರ್ಟ್‌ ಬುಧವಾರ (ಆ.8, 2012) ನೋಟಿಸ್‌ ಜಾರಿ ಮಾಡಿತ್ತು.

ಉಪ್ಪಿನಂಗಡಿಯಲ್ಲಿ ನಡೆದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಭಟ್ಟರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು.

ಆದರೆ, ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ರಾಜ್ಯ ಕೋಮು ಸೌಹಾರ್ದ ವೇದಿಕೆ ಮಂಗಳೂರು ಜಿಲ್ಲಾಧ್ಯಕ್ಷ ಸುರೇಶ್‌ ಭಟ್‌ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ಹೈಕೋರ್ಟ್ ನ್ಯಾ ಕೆ. ಶ್ರೀಧರ್ ಹಾಗೂ ನ್ಯಾ, ಬಿವಿ, ನಾಗರತ್ನ ಅವರಿದ್ದ ನ್ಯಾಯಪೀಠ ಸುರೇಶ್ ಭಟ್ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಳ್ಳಿ ಹಾಕಿದೆ.

ಜ.22, 2012 ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಉಪ್ಪಿನಂಗಡಿಯಲ್ಲಿ ಆಯೋಜಿಸಿದ್ದ ಹಿಂದೂ ಸಮಾಜೋತ್ಸವದಲ್ಲಿ ಕಲ್ಲಡ್ಕ ಭಟ್ಟರು ಮಾತನಾಡುತ್ತಾ ತಮ್ಮ ಭಾಷಣದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಮಾತುಗಳನ್ನು ಬಳಸಿದ್ದರು ಎಂದು ಆರೋಪಿಸಲಾಗಿತ್ತು.

ಉಪ್ಪಿನಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಕೂಡಾ ಸಲ್ಲಿಸಿದ್ದರು. ಆದರೆ, ದೂರುದಾರ ಸುರೇಶ್ ಭಟ್ ಅವರು ಬಿ ರಿಪೋರ್ಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ನ್ಯಾಯಾಲಯದ ಮೊರೆ ಹೊಕ್ಕಿದ್ದರು.

ಪುತ್ತೂರು ಮ್ಯಾಜಿಸ್ಟ್ರೇಟ್ ಅವರು ಈ ಪ್ರಕರಣದ ಬಗ್ಗೆ ಪರಿಶೀಲಿಸಿರುವುದುದರಿಂದ ಹೈಕೋರ್ಟ್ ಹೆಚ್ಚಿನ ಪರಿಶೀಲನೆ ನಡೆಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ PIL ತಳ್ಳಿ ಹಾಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+