1500 ಹೊಸ ಹುದ್ದೆಗಳ ನೇಮಕಾತಿಗೆ ಸರಕಾರ ಅಸ್ತು

ktk-muzrai-dept-to-recruit-1500-staff-kota-srinivas
ಶಿವಮೊಗ್ಗ, ಜ.23: ರಾಜ್ಯ ಮುಜರಾಯಿ ಇಲಾಖೆಯು 1500 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಈ ಬಗ್ಗೆ ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ನೀಡಿದ್ದಾರೆ. ಇಲಾಖೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ಎಸಿ ಮಟ್ಟದ ಹುದ್ದೆಗಳ ಭರ್ತಿ ನಡೆಯಲಿದೆ.

ಕುವೆಂಪು ರಂಗಮಂದಿರದಲ್ಲಿ ನಡೆದ ಮುಜರಾಯಿ ದೇವಾಲಯಗಳ ಅರ್ಚಕರು ಹಾಗೂ ದೇವಾಲಯ ವ್ಯವಸ್ಥಾಪನ ಸಮಿತಿಯ ಸದಸ್ಯರ ಸಮಾವೇಶದಲ್ಲಿ ಮಾತನಾಡುತ್ತಾ ಸಚಿವರು ಮಂಗಳವಾರ ಈ ವಿಷಯ ತಿಳಿಸಿದ್ದಾರೆ.

ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ, ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್, ನಗರಸಭಾ ಅಧ್ಯಕ್ಷ ಚೆನ್ನಬಸಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದತ್ತಾತ್ರಿ, ಜಿಲ್ಲಾಧಿಕಾರಿ ಎಂವಿ ವೇದಮೂರ್ತಿ ಮೊದಲಾದವರಿದ್ದರು.

ಹೊಸ ನೇಮಕಾತಿಗೆ ಹಣಕಾಸು ಇಲಾಖೆ ಕೂಡ ಅನುಮತಿ ನೀಡಿದೆ. ಸದ್ಯದಲ್ಲಿಯೇ ಈ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಹಾಗೆಯೇ 18 ಜಿಲ್ಲೆಗಳಲ್ಲಿ ಸಿಬ್ಬಂದಿ ಓಡಾಟಕ್ಕೆ ಸೂಕ್ತ ವಾಹನದ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮುಜರಾಯಿ ದೇವಾಲಯಗಳ ಸಂಖ್ಯೆ 34,266 ಇದೆ. ಇಷ್ಟೊಂದು ದೇವಾಲಯಗಳ ಉಸ್ತುವಾರಿಯನ್ನು 400- 500 ಸಿಬ್ಬಂದಿ ಮಾತ್ರ ನೋಡಿಕೊಳ್ಳುತ್ತಿದ್ದು ಅವರ ಮೇಲೆ ಕರ್ತವ್ಯ ಒತ್ತಡ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇವಾಲಯಗಳ ಅರ್ಚಕರಿಗೆ ವಾರ್ಷಿಕವಾಗಿ ನೀಡಲಾಗುತ್ತಿದ್ದ 6,000 ರೂ. ತಸ್ತಿಕ್ ಮೊತ್ತವನ್ನು ಪ್ರಸ್ತುತ 24 ಸಾವಿರ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಅರ್ಚಕರಿಗೆ ಗುರುತು ಚೀಟಿ ನೀಡಲು ಕ್ರಮಕೈಗೊಳ್ಳಲಾಗಿದೆ. ಇದರ ಜೊತೆಗೆ ಪರಿಹಾರ ನಿಧಿ ಸ್ಥಾಪಿಸಲಾಗುತ್ತಿದೆ. ಮನೆಯಿಲ್ಲದ ಅರ್ಚಕರಿಗೆ ದೇವಾಲಯ ಆವರಣ ಅಥವಾ ಸಮೀಪದಲ್ಲಿ ಮನೆ ನಿರ್ಮಿಸಿಕೊಳ್ಳಲು 5 ಲಕ್ಷ ರೂ. ನೀಡಲಾಗುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+