ಮ್ಯಾನ್ ಬೂಕರ್ ಪ್ರಶಸ್ತಿ ಪಟ್ಟಿಯಲ್ಲಿ ಅನಂತಮೂರ್ತಿ

ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿರುವ 10 ಕಾದಂಬರಿಕಾರರಲ್ಲಿ ಭಾರತದಿಂದ ಆಯ್ಕೆಯಾಗಿರುವ ಏಕೈಕ ಕಾದಂಬರಿಕಾರ ಡಾ. ಯು.ಆರ್. ಅನಂತಮೂರ್ತಿ. ಈ ಪಟ್ಟಿಯಲ್ಲಿರುವ ಇತರರು : ಆಹರೋನ್ ಆಪಲ್‌ಫೀಲ್ಡ್ (ಇಸ್ರೇಲ್), ಲಿಡಿಯಾ ಡೇವಿಸ್ (ಅಮೆರಿಕ), ಇಂತಿಜಾರ್ ಹುಸೇನ್ (ಪಾಕಿಸ್ತಾನ), ಯಾನ್ ಲಿಯಾಂಕೆ (ಚೀನಾ), ಮಾರಿ ಎನ್‌ಡಿಯಾ (ಫ್ರಾನ್ಸ್), ಜೋಸಿಪ್ ನೋವಾಕೊವಿಚ್ (ಕೆನಡಾ), ಮರಿಲಿನ್ ರಾಬಿನ್ಸನ್ (ಅಮೆರಿಕ), ವ್ಲಾಡಿಮಿರ್ ಸೊರೊಕಿನ್ (ರಷ್ಯಾ) ಮತ್ತು ಪೀಟರ್ ಸ್ಟಾಮ್ (ಸ್ವಿಟ್ಜರ್‌ಲೆಂಡ್).
60 ಸಾವಿರ ಪೌಂಡ್ ಪ್ರಶಸ್ತಿ ಮೊತ್ತ ಹೊಂದಿರುವ ಮ್ಯಾನ್ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕಾದಂಬರಿಕಾರ ಬರೆದಿರುವ ಒಂದು ಪ್ರಶಸ್ತಿಯನ್ನು ಮಾತ್ರ ಪರಿಗಣಿಸದೆ, ಅವರ ಒಟ್ಟಾರೆ ಸಾಹಿತ್ಯಕೃಷಿಯನ್ನು ತುಲನೆಮಾಡಿ ನೋಡಲಾಗುತ್ತದೆ. ಆಂಗ್ಲ ಭಾಷೆಯಲ್ಲಿ ಕಾದಂಬರಿಕಾರ ಕೃತಿಗಳನ್ನು ಬರೆದಿರಬೇಕು ಅಥವಾ ಅವರು ಬರೆದಿರುವ ಕಾದಂಬರಿಗಳು ಆಂಗ್ಲ ಭಾಷೆಯಲ್ಲಿ ಅನುವಾದಿತವಾಗಿರಬೇಕು. ಅನಂತಮೂರ್ತಿಯವರ 'ಸಂಸ್ಕಾರ' ಕೃತಿ ಸೇರಿದಂತೆ ಅನೇಕ ಕಾದಂಬರಿಗಳು ಇಂಗ್ಲಿಷಿಗೆ ಭಾಷಾಂತರಗೊಂಡಿವೆ.
ಡಿ.22ರಂದು 80ನೇ ಹುಟ್ಟುಹಬ್ಬ ಆಚರಿಸಿಕೊಂಡ ಅನಂತಮೂರ್ತಿಯವರು ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ 'ಸಂಸ್ಕಾರ' ಕಾದಂಬರಿ ಸೇರಿದಂತೆ 5 ಕಾದಂಬರಿಗಳನ್ನು, ಎಂಟು ಸಣ್ಣಕಥಾ ಸಂಕಲನಗಳನ್ನು, ಒಂದು ನಾಟಕವನ್ನು, ಮೂರು ಕವನ ಸಂಕಲನಗಳನ್ನು ಮತ್ತು ಎಂಟು ಪ್ರಬಂಧ ಸಂಕಲನಗಳನ್ನು ಬರೆದಿದ್ದಾರೆ. ಅವರ ಕೃತಿಗಳು ಇಂಗ್ಲಿಷ್ ಮತ್ತು ಯುರೋಪಿನ ಅನೇಕ ಭಾಷೆಗಳಲ್ಲಿ ಅನುವಾದಿತವಾಗಿವೆ. ಅವರ ಕಾದಂಬರಿ 'ಭಾರತಿಪುರ'ಕ್ಕೆ 2011ರಲ್ಲಿ ಹಿಂದೂ ಸಾಹಿತ್ಯ ಪ್ರಶಸ್ತಿ ಲಭಿಸಿತ್ತು.
ತೀರ್ಪುಗಾರರ ಪಟ್ಟಿಯಲ್ಲಿ ಒಟ್ಟು ಐವರಿದ್ದು, ಲಂಡನ್ನಿನ ವಿಕ್ಟೋರಿಯಾ ಮತ್ತು ಅಲ್ಬರ್ಟ್ ಮ್ಯೂಸಿಯಂನಲ್ಲಿ ಮೇ 22ರಂದು ಪ್ರಶಸ್ತಿ ವಿಜೇತರ ಹೆಸರನ್ನು ಬಹಿರಂಗಪಡಿಸಲಾಗುವುದು. ಜ್ಞಾನಪೀಠ, ಕನ್ನಡ ರಾಜ್ಯೋತ್ಸವ, ಮಾಸ್ತಿ, ಪದ್ಮ ಭೂಷಣ, ಕನ್ನಡ ವಿಶ್ವವಿದ್ಯಾಲಯದ ನಾಡೋಜ, ಹಿಂದೂ ಸಾಹಿತ್ಯ ಪ್ರಶಸ್ತಿಗಳನ್ನು ಪಡೆದಿರುವ ಡಾ. ಯು.ಆರ್. ಅನಂತಮೂರ್ತಿಯವರಿಗೆ ಪ್ರತಿಷ್ಠಿತ ಮ್ಯಾನ್ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯೂ ಲಭಿಸುವಂತಾಗಲಿ.
ಧಾರವಾಡ ಸಾಹಿತ್ಯ ಸಂಭ್ರಮದಲ್ಲಿ ಯುಆರ್‌ಎ : ಧಾರವಾಡದಲ್ಲಿ ಜ.25ರಿಂದ 27ರವರೆಗೆ ನಡೆಯುತ್ತಿರುವ ಧಾರವಾಡ ಸಾಹಿತ್ಯ ಸಂಭ್ರಮದಲ್ಲಿ ಡಾ. ಯು.ಆರ್.ಅನಂತಮೂರ್ತಿ ಅವರು ಸಾಹಿತಿ ಜಿ.ಎಸ್.ಅಮೂರ ಅವರ ಜೊತೆ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಆಶಯ ಭಾಷಣ ಮಾಡಲಿದ್ದಾರೆ. ಉದ್ಘಾಟನೆ ಜ.25ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications