ಶಾಮನೂರುಗೆ 'ಕೈ'ಕೊಟ್ಟು ಮತ್ತಿಕಟ್ಟಿಗೆ ಪ್ರಚಾರ ಹೊಣೆ

ಮತ್ತಿಕಟ್ಟಿ ಅವರನ್ನು ಅನುಮೋದಿಸಿ ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್‌ಗೆ ಪ್ರಸ್ತಾವನೆ ಕಳುಹಿಸಿದ್ದರು. ಪರಮೇಶ್ವರ ಮತ್ತು ಸಿದ್ದರಾಮಯ್ಯ ಪ್ರಸ್ತಾವನೆ ಆಧರಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತಿಕಟ್ಟಿ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಳಸಿ ಆದೇಶ ಹೊರಡಿಸಿದ್ದಾರೆ.
ಸಮತೋಲನಕ್ಕೆ ಬಂದ ಜಾತಿ ಲೆಕ್ಕಾಚಾರ :
ಈ ನೇಮಕಾತಿ ಹಿಂದೆ ಕಾಂಗ್ರೆಸ್ ಜಾತಿ ಲೆಕ್ಕಾಚಾರದ ದಾಳ ಉರುಳಿಸಿದೆ. ಬಹುಸಂಖ್ಯಾತ ಸಮುದಾಯಕ್ಕೆ ಸೇರಿದ ಮುಖಂಡರಿಗೆ ಆದ್ಯತೆ ನೀಡುತ್ತಿಲ್ಲ ಎಂಬ ಆರೋಪ ನಿವಾರಣೆಗೆ ಚುನಾವಣೆ ಸಂದರ್ಭದಲ್ಲಿ ಈ ತಂತ್ರ ಹೆಣೆಯಲಾಗಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ ಪರಮೇಶ್ವರ ದಲಿತ ಸಮುದಾಯಕ್ಕೆ ಸೇರಿದ್ದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದುಳಿದ ವರ್ಗದ ಮುಖಂಡರು.
ಇನ್ನು, ಕೇಂದ್ರವನ್ನು ಪ್ರತಿನಿಧಿಸುವ ನಾಲ್ವರು ಸಚಿವರ ಪೈಕಿ ಖರ್ಗೆ ಹಾಗೂ ಮುನಿಯಪ್ಪ ದಲಿತ ಸಮುದಾಯಕ್ಕೆ ಸೇರಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ರೆಹಮಾನ್ ಖಾನ್ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಮೊಯ್ಲಿಗೆ ಅವಕಾಶ ಕಲ್ಪಿಸಲಾಗಿದೆ. ಇದು ಬಹುಸಂಖ್ಯಾತ ಸಮುದಾಯದ ನಾಯಕರಲ್ಲಿ ಅಸಮಾಧಾನ ಸೃಷ್ಟಿಸಿತ್ತು.
ಇದನ್ನು ಹೋಗಲಾಡಿಸಲು ವೀರಶೈವ ಸಮುದಾಯಕ್ಕೆ ಸೇರಿದ ಮತ್ತಿಕಟ್ಟಿ, ಒಕ್ಕಲಿಗ ಜನಾಂಗಕ್ಕೆ ಸೇರಿದ ಡಿಕೆ ಶಿವಕುಮಾರ್ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ರಮೇಶ್‌ಕುಮಾರ್‌ಗೆ ಹೊಸ ಪಟ್ಟ ಕಟ್ಟಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.












Click it and Unblock the Notifications