ಮಂಡ್ಯದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಬಡಾವಣೆ

ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನೀಡಿರುವ ಕೊಡುಗೆ ಅಪಾರವಾಗಿದ್ದು, ಮಂಡ್ಯ ಹೆಸರನ್ನು ಚಿರಸ್ಥಾಯಿಗೊಳಿಸಿದ, ಜಿಲ್ಲೆಯವರೇ ಆದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಹೆಸರು ಸೂಕ್ತವಾಗಿರುತ್ತದೆ ಎಂದು ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಎಸ್ ಆತ್ಮಾನಂದ ಮನವಿ ಮಾಡಿದ್ದಾರೆ.
ಚುಂಚಶ್ರೀ ಯುಗಪುರುಷ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಮಾತನಾಡಿದ ಆತ್ಮಾನಂದ ಅವರು ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರದಲ್ಲಿ ಚುಂಚಶ್ರೀಗಳು ಯುಗಪುರುಷ ಎಂದು ಅವರು ಅಭಿಪ್ರಾಯಪಟ್ಟರು.
ಮತ್ತೊಂದೆಡೆ ನಗರದ ರೈತ ಸಭಾಂಗಣದಲ್ಲಿ ಕರ್ನಾಟಕ ಸಂಘ ಹಾಗೂ ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಆಯೋಜಿಸಿದ್ದ ಸಭೆಯಲ್ಲಿ ಅಗಲಿದ ಸ್ವಾಮೀಜಿಗೆ ಶ್ರದ್ಧಾಂಜಲಿ ಅರ್ಪಿಸಿ ಶ್ರೀಗಳ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಲಾಯಿತು.












Click it and Unblock the Notifications