ಬೆಂಗಳೂರು: ಮಹಿಳಾ ಟೆಕ್ಕಿ ಆತ್ಮಹತ್ಯೆ

ಹಲಸೂರಿನ ಅಪಾರ್ಟ್ ಮೆಂಟಿನಲ್ಲಿ ನಾಲ್ಕೈದು ತಿಂಗಳಿಂದ ಒಬ್ಬಂಟಿ ಜೀವನ ನಡೆಸುತ್ತಿದ್ದ ನೀತು ಸೇತು (35) ಸೀರೆಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇಲ್ಲಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.
ಹಿಂದೆ Infosys ಮತ್ತು ಪ್ರಸ್ತುತ HP ಕಂಪನಿಯ ಟೆಕ್ಕಿ ನೀತು ಅವರ ಪತಿ ವಿಜಯ್ ಪಿಳ್ಳೈ ಕೂಡ ಸಾಫ್ಟ್‌ವೇರ್ ಇಂಜಿನಿಯರ್. ಇತ್ತೀಚೆಗೆ ಕೆಲಸ ಬಿಟ್ಟು ಮನೆಯಲ್ಲೇ ಇದ್ದರು. ಜತೆಗೆ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದರು. ಒಂದೆಡೆ ಸಾಲಗಾರರ ಕಾಟ ಮತ್ತೊಂದೆಡೆ ಪತಿ ದೂರವಾದ ನೋವಿನಿಂದ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 'ನನ್ನ ಸಾವಿಗೆ ನಾನೇ ಕಾರಣ' ಎಂದು ಮೊಬೈಲಿನಲ್ಲಿ ಟೈಪ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಟೆನ್ಸಿಂಗ್ ಟೌನ್ ನಲ್ಲಿರುವ ರಿವೇರಿಯರ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಬಾಗಿಲು ಒಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಲಸೂರು ಠಾಣಾ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.












Click it and Unblock the Notifications