ಬೆಂಗಳೂರಿನಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ

Young woman abused in Bangalore
ಬೆಂಗಳೂರು, ಫೆ. 1 : ಹತ್ತೊಂಬತ್ತು ವರ್ಷ ವಯಸ್ಸಿನ ಯುವತಿಯ ಮೇಲೆ ಮೂವರು ಅಪರಿಚಿತ ಯುವಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ಬೆಂಗಳೂರಿನಲ್ಲಿ ದಾಖಲಾಗಿದೆ. ಈ ಘಟನೆ ಬೆಂಗಳೂರಿನ ಕಾಡಗೊಂಡನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ರಾತ್ರಿ 10.15ರ ಸುಮಾರಿಗೆ ಶಿವಾಜಿನಗರಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ 19 ವರ್ಷದ ಯುವತಿಯ ಮೇಲೆ ದಾಳಿ ಮಾಡಿದ ಯುವಕರು ಆಕೆಯನ್ನು ಎಳೆದುಕೊಂಡು ಹೋಗಿ ಲಿಂಗರಾಜಪುರ ರೈಲ್ವೆ ಹಳಿಯ ಬಳಿ ಆಕೆಯ ಮೇಲೆ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿ ಶುಕ್ರವಾರ ಬೆಳಗಿನ ಜಾವ ಕಾಡಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಈ ಘಟನೆ ರೈಲ್ವೆ ಹಳಿಯ ಮೇಲೆ ನಡೆದಿರುವುದರಿಂದ ಪ್ರಕರಣವನ್ನು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ಕೆಜಿಹಳ್ಳಿ ಪೊಲೀಸರು ತಿಳಿಸಿದ್ದಾರೆ. ಸದ್ಯಕ್ಕೆ, ಆಕೆಯ ಮೇಲೆ ಅತ್ಯಾಚಾರ ನಡೆದಿದೆಯೋ ಇಲ್ಲವೋ ಎಂಬುದನ್ನು ದೃಢಪಡಿಸಿಕೊಳ್ಳಲು ಯುವತಿಯನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆಂದು ಕಳುಹಿಸಲಾಗಿದೆ.

ಸರ ಅಪಹರಣ : ಅಂಗಡಿಗೆ ಸಾಮಾನು ಖರೀದಿಸಲು ಬಂದಾಗ ಮಹಿಳೆಯೊಬ್ಬರ ಮಾಂಗಲ್ಯವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಜ.31ರ ಸಂಜೆ 8 ಗಂಟೆಗೆ ವಿಲ್ಸನ್ ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದಾಪುರದ ನಿವಾಸಿ ಆಗಿರುವ ಮಾಧವಿಲತಾ ಎಂಬುವವರು ಸಿದ್ದಯ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಮೇಲೆ ಬಂದ ಕಳ್ಳರು 30 ಗ್ರಾಂ ತೂಗುವ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+