ಡ್ರಗ್ಸ್ ಚಟಕ್ಕೆ ಬಿದ್ದ ಮಂಗಳೂರು ವಿದ್ಯಾರ್ಥಿನಿ ಆತ್ಮಹತ್ಯೆ

ಈಕೆ ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದರು. ಈ ಚಟವನ್ನು ಬಿಡಿಸಲು ಈಕೆಯ ಪೋಷಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಎರಡು ತಿಂಗಳಿಂದ ಡೀ ಅಡಿಕ್ಷನ್ ಚಿಕಿತ್ಸೆ ಪಡೆಯುತ್ತಿದ್ದ ಈಕೆ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು. ಶನಿವಾರವಷ್ಟೇ (ಫೆ.1) ಆಸ್ಪತ್ರೆಯಿಂದ ಬಿಡುಗಡೆಯಾದ ಈಕೆಯನ್ನು ಮನೆಗೆ ಕರೆದೊಯ್ಯಲಾಗಿತ್ತು.
ಆದರೆ ಮನೆಗೆ ಬಂದ ಮೇಲೂ ಈಕೆಯ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಮಾದಕ ವಸ್ತುಗಳನ್ನು ತೆಗೆದುಕೊಳ್ಳಲು ಹಣಕ್ಕಾಗಿ ತಂದೆತಾಯಿಯನ್ನು ಪೀಡಿಸುತ್ತಿದ್ದರು. ಈಕೆಯ ವರ್ತನೆಯಿಂದ ಬೇಸತ್ತ ಪೋಷಕರು ಮನೆ ಬಿಟ್ಟು ಎಲ್ಲೂ ಹೋಗದಂತೆ ಎಚ್ಚರಿಸಿದ್ದರು.
ಕೊಠಡಿಯೊಂದರಲ್ಲಿ ಈಕೆಯನ್ನು ಕೂಡಿಹಾಕಿದ್ದರು ಎನ್ನಲಾಗಿದೆ. ಶನಿವಾರ ತಡರಾತ್ರಿ ಈಕೆ ರೂಮಿನಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡಿದಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಶಾರಾದಾ ವಿದ್ಯಾಲಯದಲ್ಲಿ ಓದುತ್ತಿದ್ದ ಸ್ನೇಹಾ ಮಾದಕ ವಸ್ತುಗಳ ವ್ಯಸನಿಯಾಗಿರುವ ಹಿಂದೆ ಡ್ರಗ್ಸ್ ಮಾಫಿಯಾ ಕೈವಾಡ ಇದೆ ಎನ್ನಲಾಗಿದೆ. ವಿದ್ಯಾರ್ಥಿಗಳು ಈ ರೀತಿಯ ಕೆಟ್ಟ ಚಟಗಳನ್ನು ಮೈಗೂಡಿಸಿಕೊಳ್ಳುತ್ತಿದ್ದು ತಮ್ಮ ಬಂಗಾರದಂತಹ ಬಾಳನ್ನು ನರಕ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.












Click it and Unblock the Notifications