ಫೆಬ್ರವರಿ 4ರಿಂದ ವಿಧಾನಸೌಧದ ಸುತ್ತ ನಿಷೇಧಾಜ್ಞೆ

Around Vidhana Soudha
ಬೆಂಗಳೂರು, ಫೆ.3: ಸೋಮವಾರದಿಂದ (ಫೆ.4) 10 ದಿನಗಳ ಕಾಲ ವಿಧಾನಸೌಧದ ಸುತ್ತಮುತ್ತ ಐದಕ್ಕಿಂತಲೂ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಮೆರವಣಿಗೆ, ಪ್ರತಿಭಟನೆ, ಸಭೆಗಳನ್ನು ನಡೆಸುವಂತಿಲ್ಲ. ಮಾರಕಾಸ್ತ್ರಗಳನ್ನು ಕೊಂಡೊಯ್ಯುವಂತಿಲ್ಲ.

ಅಷ್ಟೇ ಅಲ್ಲ ಸಿಡಿಮದ್ದು, ಸ್ಫೋಟಕಗಳನ್ನು ಸಿಡಿಸುವಂತಿಲ್ಲ, ಪ್ರತಿಕೃತಿ ಪ್ರದರ್ಶನ, ದಹನ, ಪ್ರಚೋದನಾತ್ಮಕ ಭಾಷಣ, ಭಿತ್ತಿಪತ್ರ ಪ್ರದರ್ಶನಗಳನ್ನು ನಿಷೇಧಿಸಲಾಗಿದೆ. ಕಾರಣ ಫೆ.4ರಿಂದ ವಿಧಾನಮಂಡಲದ ಜಂಟಿ ಅಧಿವೇಷನ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

ವಿಧಾನಸೌಧದ ಸುತ್ತಮುತ್ತ 2 ಕಿ.ಮೀವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದಾರೆ ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ. ಫೆ.4ರ ಬೆಳಗ್ಗೆ 6ರಿಂದ ಈ ನಿಷೇಧಾಜ್ಞೆ ಜಾರಿಯಾಗಲಿದೆ. ಸಾರ್ವಜನಿಕ ರಜಾ ದಿನಗಳು ಹಾಗೂ ಅಧಿವೇಷನ ನಡೆಯದ ದಿನಗಳನ್ನು ಹೊರತುಪಡಿಸಿ ಫೆಬ್ರವರಿ 13ರ ಮಧ್ಯರಾತ್ರಿ 12ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಕೆಜೆಪಿ ಹಾಗೂ ಬಿಜೆಪಿ ನಡುವಿನ ಹಗ್ಗಜಗ್ಗಾಟ ಈ ಬಾರಿಯ ಅಧಿವೇಶನದ ಬಗ್ಗೆ ಮತ್ತಷ್ಟು ಕುತೂಹಲ ಮೂಡಿಸಿದೆ. ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ಕಾರ್ಮಿಕ ಮತ್ತು ವಿದ್ಯಾರ್ಥಿ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಆಯುಕ್ತರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+