ಬಿಜಾಪುರ: ನುಡಿ ಹಬ್ಬಕ್ಕೆ ವಿಶೇಷ ಬಸ್ ವ್ಯವಸ್ಥೆ

ಫೆ. 6 ರಿಂದ 12 ರವರೆಗಿನ ಅವಧಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ವಿಶೇಷ ಸಾರಿಗೆ ಸೌಲಭ್ಯ ಒದಗಿಸಲು ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶಿಸಲಾಗಿದೆ.
ಮುಂಗಡ ಟಿಕೆಟ್: ಪ್ರಮುಖವಾಗಿ ಬೆಂಗಳೂರಿನಿಂದ ಬಿಜಾಪುರಕ್ಕೆ ಸಂಜೆ 7 ಗಂಟೆಗೆ ನಾನ್ ಎ.ಸಿ.ಸ್ಲೀಪರ್ ಹಾಗೂ ರಾತ್ರಿ 9 ಗಂಟೆಗೆ ವೋಲ್ವೋ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಮುಂಗಡ ಬುಕ್ಕಿಂಗ್ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬರಗಾಲವಿರುವರಿಂದ ನವೆಂಬರ್ ತಿಂಗಳಿನಲ್ಲಿ ನಡೆಸಬೇಕಿದ್ದ ಸಮ್ಮೇಳನವನ್ನು ಮುಂದೂಡಲಾಗಿತ್ತು. ಫೆ.7ರಿಂದ ಬಿಜಾಪುರದ ಸೈನಿಕ ಶಾಲೆಯ ಆವರಣದಲ್ಲಿ ಸಮ್ಮೇಳನ 79ನೇ ಅಖಿಲ ಭಾರತ ಕನ್ನಡ ಸಮ್ಮೇಳನ ಆರಂಭಗೊಳ್ಳಲಿದೆ.
2013ರ ಫೆ.7, 8 ಮತ್ತು 9ರಂದು ನುಡಿ ತೇರು ನಡೆಸಲು ಬೇಕಾದ ಸಿದ್ಧತೆ, ಆಯೋಜನೆ ಬಗ್ಗೆ ಬಿಜಾಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಚಿವ ಗೋವಿಂದ ಕಾರಜೋಳ ಅವರು ಮಹಾಪೋಷಕರಾಗಿ, ಸಂಸದ ರಮೇಶ್ ಜಿಗಜಿಣಗಿ ಮತ್ತು ತಾವು ಪೋಷಕರಾಗಿ ನೇಮಕಗೊಂಡಿದ್ದಾರೆ. ಇನ್ನುಳಿದಂತೆ ಸಚಿವ ಎಸ್.ಕೆ.ಬೆಳ್ಳುಬ್ಬಿ, ಅಧ್ಯಕ್ಷರಾಗಿ, ಸ್ಥಳೀಯ ಶಾಸಕ ಅಪ್ಪು ಪಟ್ಟಣಶೆಟ್ಟಿ ಕಾರ್ಯಾಧ್ಯಕ್ಷರಾಗಿ, ಜಿಲ್ಲಾಧಿಕಾರಿ ಶಿವ ಯೋಗಿ, ಕೋಶಾಧ್ಯಕ್ಷರಾಗಿ, ಜಿಲ್ಲಾ ಕಸಾಪ ಅದ್ಯಕ್ಷ ಮಲ್ಲಿ ಕಾರ್ಜುನ ಯಂಡಿಗೇರಿ ಪ್ರಧಾನ ಕಾರ್ಯದರ್ಶಿಯಾಗಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಹೇಳಿದರು.












Click it and Unblock the Notifications