ಬಜೆಟ್ ಗೆ ಬಿಎಸ್ವೈ ಅವಕಾಶ:ರಹಸ್ಯ ಕಂಡುಕೊಂಡ ಜೆಡಿಎಸ್

ಬಜೆಟ್ ಮಂಡನೆ ವಿಚಾರದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪನವರ ನಡುವೆ ಒಳ ಒಪ್ಪಂದ ನಡೆದಿದೆ ಎಂದು ಜೆಡಿಎಸ್ ಮುಖಂಡ ಬಸವರಾಜ್ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಯಡಿಯೂರಪ್ಪ ಆಪ್ತರಾದ ಬಸವರಾಜ್ ಬೊಮ್ಮಾಯಿ, ಮುರುಗೇಶ್ ನಿರಾಣಿ ಮತ್ತು ರೇಣುಕಾಚಾರ್ಯ ಒಳ್ಳೆ ಆದಾಯವಿರುವ ಪ್ರಭಾವಿ ಖಾತೆಯನ್ನು ಹೊಂದಿದ್ದಾರೆ.
ಆ ಮೂಲಕ ಬಂದಷ್ಟು ಬರಲಿ ಎಂದು ಚುನಾವಣೆ ಖರ್ಚಿಗೆ ಕೊನೆಯವರೆಗೂ ದೋಚಿಕೊಂಡು ಹೋಗುವ ಉದ್ದೇಶದಿಂದ ಯಡಿಯೂರಪ್ಪ ಬಜೆಟ್ ಮಂಡಿಸಲು ಅವಕಾಶ ನೀಡುತ್ತಿದ್ದಾರೆಂದು ಯತ್ನಾಳ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಯತ್ನಾಳ್, ಕೆಜೆಪಿ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು. ಇವರಿಗೆ ಜನಸೇವೆ ಮಾಡುವ ಉದ್ದೇಶವಿಲ್ಲ, ಹೇಗೆ ಸರಕಾರದ ಬೊಕ್ಕಸವನ್ನು ಲೂಟಿ ಮಾಡುವುದು ಅನ್ನುವುದಷ್ಟೆ ಚಿಂತೆ. ಇಂಥವರಿಂದ ನಮ್ಮ ರಾಜ್ಯ ಉದ್ದಾರವಾಗುವುದಿಲ್ಲ.
ನನ್ನನ್ನೂ ಸೇರಿ ಲಿಂಗಾಯಿತ ಮುಖಂಡರಾದ ಶಿವಪ್ಪ, ಬಸವರಾಜ ಪಾಟೀಲ್ ಸೇಡಂ ಮುಂತಾದವರನ್ನು ಬಿಜೆಪಿಯಲ್ಲಿ ಯಡಿಯೂರಪ್ಪ ಮೂಲೆಗುಂಪು ಮಾಡಿದರು. ಕೆಲಸಕ್ಕೆ ಬಾರದವರನ್ನು ರಾಜಕೀಯವಾಗಿ ಮೇಲಕ್ಕೆ ತಂದರು ಎಂದು ಯತ್ನಾಳ್ ಆರೋಪಿಸಿದ್ದಾರೆ.
ರಾಜ್ಯವನ್ನು ಯಡಿಯೂರಪ್ಪ ಲೂಟಿ ಹೊಡೆಯುತ್ತಿದ್ದರೂ ಮಠಾಧೀಶ ಅವರ ಬೆಂಬಲಕ್ಕೆ ನಿಂತರು. ಇನ್ನಾದರೂ ಮಠಾಧೀಶರು ಆತ್ಮಾವಲೋಕನ ಮಾಡಿಕೂಳ್ಳಲಿ.
ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪ ಇಬ್ಬರೂ ಸೇರಿ ಲಿಂಗಾಯತ ಸಮುದಾಯದ ಮಾರ್ಯದೆ ತೆಗೆಯುತ್ತಿದ್ದಾರೆ ಎಂದು ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications