ಸಹಾರಾ ಆಸ್ತಿಪಾಸ್ತಿ ವಶಕ್ಕೆ ಮುಂದಾದ ಸೆಬಿ

ಸರ್ವೋಚ್ಚ ನ್ಯಾಯಾಲಯದ ಈ ಆದೇಶವು ದೇಶದ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳಲ್ಲೊಂದಾದ ಸಹರಾ ಗ್ರೂಪ್‌ಗೆ ದೊಡ್ಡ ಹೊಡೆತ ನೀಡಲಿದೆ. ಸಹಾರಾ ಸಂಸ್ಥೆ ತನ್ನ ಹೂಡಿಕೆದಾರರಿಗೆ 24 ಸಾವಿರ ಕೋಟಿ ಹಿಂತಿರುಗಿಸಲು ಕಳೆದ ಡಿಸೆಂಬರ್ ನಲ್ಲಿ ಸುಪ್ರೀಂಕೋರ್ಟ್ ಹೆಚ್ಚಿನ ಕಾಲಾವಕಾಶ ನೀಡಿತ್ತು. ಎರಡು ತಿಂಗಳಲ್ಲಿ 24 ಸಾವಿರ ಕೋಟಿ ರು ಹಿಂತಿರುಗಿಸಲು ಸಹಾರಾ ಸಂಸ್ಥೆಗೆ ಸಾಧ್ಯವಾಗಿರಲಿಲ್ಲ.
ಜೊತೆಗೆ 5,120 ಕೋಟಿ ರು ಗಳಿಗೆ ಡಿಮ್ಯಾಂಡ್ ಡ್ರಾಫ್ಟನ್ನು ಸೆಬಿಗೆ ನೀಡಬೇಕು ಎಂದು ಸಿಜೆ ಅಲ್ತಾಮಸ್ ಕಬೀರ್ ಅವರು ಸೂಚಿಸಿದ್ದಾರೆ. ಉಳಿದ ಬಾಕಿ ಮೊತ್ತವನ್ನು ಎರಡು ಕಂತುಗಳಲ್ಲಿ ಫೆಬ್ರವರಿ ತಿಂಗಳೊಳಗೆ ಕಟ್ಟತಕ್ಕದ್ದು ಎಂದು ನ್ಯಾಯಪೀಠ ಹೇಳಿತ್ತು.
ಸಹರಾ ಸಮೂಹದ ಸಂಸ್ಥೆಗಳಾದ ಸಹರಾ ಇಂಡಿಯಾ ರಿಯಲ್ ಎಸ್ಟೇಟ್ ಕಾರ್ಪೊರೇಶನ್ (ಎಸ್‌ಐಆರ್‌ಇಸಿ) ಹಾಗೂ ಸಹರಾ ಹೌಸಿಂಗ್ ಇನ್‌ವೆಸ್ಟ್‌ಮೆಂಟ್ ಕಾರ್ಪೊರೇಶನ್ (ಎಸ್‌ಎಚ್‌ಐಸಿ) ಸೊತ್ತುಗಳನ್ನು ಜಪ್ತಿ ಮಾಡುವಂತೆ ಹಾಗೂ ಅವುಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಕೋರ್ಟ್ ಹೇಳಿದೆ.
ಅಲ್ಲದೆ, 2012ರ ಆಗಸ್ಟ್ 31ರಂದು ನೀಡಿದ ಆದೇಶವನ್ನು ಏಕೆ ಇನ್ನೂ ಪಾಲಿಸಿಲ್ಲ ಎಂದು ಸೆಬಿಯನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ಕೆ.ಎಸ್.ರಾಧಾಕೃಷ್ಣನ್ ಹಾಗೂ ಜೆ.ಎಸ್.ಖೇಹರ್ ಅವರನ್ನೊಳಗೊಂಡ ನ್ಯಾಯಪೀಠ ಸಹರಾ ಗ್ರೂಪ್‌ಗೆ ನೋಟಿಸ್ ಜಾರಿಗೊಳಿಸಿದೆ.
ಸೆಬಿಯ ಕಾನೂನುಗಳನ್ನು ಉಲ್ಲಂಘಿಸಿ ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿದ್ದಕ್ಕಾಗಿ ಸಹರಾ ಸಮೂಹದ ಈ ಎರಡು ಕಂಪೆನಿಗಳು ತಮ್ಮ ಹೂಡಿಕೆದಾರರಿಗೆ 24 ಸಾವಿರ ಕೋಟಿ ರೂ.ಗಳನ್ನು ಶೇ.15ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ಮೂರು ತಿಂಗಳುಗಳೊಳಗೆ ಮರುಪಾವತಿಸಬೇಕೆಂದು ಸುಪ್ರೀಂಕೋರ್ಟ್ ಕಳೆದ ವರ್ಷದ ಆಗಸ್ಟ್ 3ರಂದು ನೀಡಿದ ಆದೇಶದಲ್ಲಿ ತಿಳಿಸಿತ್ತು.
ಏನಿದು ಪ್ರಕರಣ?: ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ (ಸೆಬಿ) ನಿಯಮಗಳಿಗೆ ವಿರುದ್ಧವಾಗಿ ರೂ. 24,029 ಕೋಟಿ ರೂ. ಸಂಗ್ರಹಿಸಿದ್ದ ಸಹಾರಾ ಗ್ರೂಪ್ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. 2008 ಮತ್ತು 2011ರ ನಡುವೆ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗದಿರುವ ತನ್ನ ಎರಡು ಕಂಪನಿಗಳ ಮೂಲಕ ರೂ. 24,029 ಕೋಟಿ ನಿಯಮ ಉಲ್ಲಂಘಿಸಿ ಸಂಗ್ರಹಿಸಿದ ಆರೋಪ ಹೊತ್ತಿದೆ.
ಸಹಾರಾ ಹೌಸಿಂಗ್ ಇನ್ವೆಸ್ಟ್ ಮೆಂಟ್ ಕಾರ್ಪೊರೇಶನ್ ಮತ್ತು ಸಹಾರಾ ಇಂಡಿಯಾ ರಿಯಲ್ ಎಸ್ಟೇಟ್ ಕಾರ್ಪೊರೇಶನ್ ಮೂಲಕ ಠೇವಣಿದಾರರು ತಮಗೆ ಅಗತ್ಯವಿದ್ದಾಗ ಪರಿವರ್ತಿಸಬಹುದಾದ ಒಎಫ್ ಸಿಡಿ ಬಾಂಡ್ ಗಳನ್ನು ವಿತರಿಸುವ ಮೂಲಕ ಈ ನಿಧಿ ಸಂಗ್ರಹಿಸಲಾಗಿತ್ತು. ಠೇವಣಿ ಸಂಗ್ರಹಣೆಯ ಸ್ಪಷ್ಟ ಉದ್ದೇಶವನ್ನು ಕಂಪನಿ ಸ್ಪಷ್ಟವಾಗಿ ತಿಳಿಸಿರಲಿಲ್ಲ.
ಕಳೆದ 33 ವರ್ಷಗಳಲ್ಲಿ ಒಂದೇ ಒಂದು ಬೇನಾಮಿ ಖಾತೆ, ಹಣಕಾಸು ಅವ್ಯವಹಾರ ಕಾಣದೆ 12 ಕೋಟಿಗೂ ಅಧಿಕ ಹೂಡಿಕೆದಾರರನ್ನು ಸೃಷ್ಟಿಸಿದ ಸಹಾರಾ ಸಂಸ್ಥೆ ಎದೆಗುಂದದಿರುವುದು ಕುತೂಹಲಕಾರಿಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications