ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫ್ಲೆಕ್ಸ್, ಬ್ಯಾನರ್ ಹಾಕಲು ಅನುಮತಿ ಪಡೆಯಿರಿ

|
Google Oneindia Kannada News

Illegal Flex Displayed
ಬೆಂಗಳೂರು, ಫೆ.7 : ನಗರದಲ್ಲಿ ಈಗಾಗಲೇ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಹಾವಳಿ ವಿಪರೀತವಾಗಿದ್ದು ಇದರಿಂದ ನಗರ ಸೌಂದರ್ಯ ಹಾಳಾಗುತ್ತಿದೆ. ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವುದರಿಂದ, ರಾಜಕಾರಣಿಗಳು ಬ್ಯಾನರ್, ಫ್ಲೆಕ್ಸ್ ಗಳನ್ನು ಕಟ್ಟುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಇದರಿಂದ ಎಚ್ಚರಗೊಂಡಿರುವ ಬಿಬಿಎಂಪಿ ಅನುಮತಿ ಪಡೆಯದೆ ಅಳವಡಿಸುವ ಫೆಕ್ಸ್ ಗಳಿಗೆ ಕಡಿವಾಣ ಹಾಕಲು ನಿರ್ಧರಿಸಿದೆ.

ಹುಟ್ಟುಹಬ್ಬ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ, ಸಾವು ಮುಂತಾದವುಗಳ ಬೃಹತ್ ಬ್ಯಾನರ್, ಫ್ಲೆಕ್ಸ್ ಗಳು ನಗರದ ತುಂಬಾ ರಾರಾಜಿಸುತ್ತಿವೆ. ಕಾನೂನಿನ ಪ್ರಕಾರ ಫ್ಲೆಕ್ಸ್ ಅಥವ ಬ್ಯಾನರ್ ಕಟ್ಟುವ ಮುಂಚೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನುಮತಿ ಪಡೆದು, ನಿಗದಿತ ಶುಲ್ಕ ಪಾವತಿಸಬೇಕು. ಆದರೆ, ನಿಯಮವನ್ನು ಪಾಲಿಸದ ಜನರು, ರಾತ್ರೋರಾತ್ರಿ ನಗರದಲ್ಲಿ ಬ್ಯಾನರ್, ಫ್ಲೆಕ್ಸ್ ಅಳವಡಿಸಿ ಶುಲ್ಕದಿಂದ ಮುಕ್ತಿ ಪಡೆಯುತ್ತಿದ್ದಾರೆ.

ಅನುಮತಿ ಇಲ್ಲದೆ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ದೂರು ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಿ. ನಗರದ ಸೌಂದರ್ಯಕ್ಕೆ ಯಾವುದೇ ಧಕ್ಕೆ ಆಗದಂತೆ ನೋಡಿಕೊಳ್ಳಿ ಎಂಬ ಹೈಕೋರ್ಟ್ ಆದೇಶವನ್ನು ಪಾಲಿಸುತ್ತಿರುವ ಬಿಬಿಎಂಪಿ, ನಗರದ ಪೊಲೀಸರ ಸಹಕಾರದಿಂದ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ.

ಬನಶಂಕರಿ ಮತ್ತು ತ್ಯಾಗರಾಜನಗರ ಠಾಣಾ ವ್ಯಾಪ್ತಿಯಲ್ಲಿ ಈಗಾಗಲೇ ಈ ಕಾರ್ಯ ಆರಂಭಗೊಂಡಿದ್ದು, ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್ ಹಾಕಿರುವ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣದ ದಾಖಲಾದ ವ್ಯಕ್ತಿಗಳಿಗೆ ಸಂಬಂಧಿಸಿದ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ತೆರವುಗೊಳಿಸಲಾಗುತ್ತಿದೆ. ಇಂತಹ ಕಾರ್ಯಾಚರಣೆ ನಗರದ ವಿವಿಧ ಠಾಣೆಗಳಲ್ಲಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎನ್ನುವುದು ಹಿರಿಯ ಪೊಲೀಸ್ ಅಧಿಕಾರಿಗಳ ಹೇಳಿಕೆ.

ಆದ್ದರಿಂದ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸುವ ಮುನ್ನ ಬಿಬಿಎಂಪಿಗೆ ಮಾಹಿತಿ ನೀಡಿ. ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಿ. ಇಲ್ಲವಾದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಲು ಸಿದ್ಧರಾಗಿ.

English summary
In the City Limits Banashankari and Tygarajanagara Police Rigistering Case Who Has Displayed Flex In Their Limits Whitout BBMP Permission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X